ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಶೇ. 99.9 ವಿದ್ಯಾರ್ಥಿಗಳು ಪಾಸ್

ಬೆಂಗಳೂರು: 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ. 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದರು.

8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ ಗಂಡು ಮಕ್ಕಳು–407161 (ಎಲ್ಲರೂ ಪಾಸ್), ಹೆಣ್ಣು ಮಕ್ಕಳು–401282 ಒಬ್ಬ ವಿದ್ಯಾರ್ಥಿಯ ಹೆಸರಿನಲ್ಲಿ ಬೇರೊಬ್ಬರು ಪರೀಕ್ಷೆ ಬರೆದಿದ್ದರು ಎಂಬುದು ತಿಳಿದು ಬಂದಿದೆ.

ವಿದ್ಯಾರ್ಥಿಗಳು https://sslckarnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.

× Chat with us