ಬೆಂಗಳೂರು : ಕರ್ನಾಟಕದ ಪಡಿತರ ವ್ಯವಸ್ಥೆ ಇದೀಗ ಮಲೇಷಿಯಾ ಸರ್ಕಾರದ ಗಮನ ಸೆಳೆದಿದ್ದು, ಈ ನಿಟ್ಟಿನಲ್ಲಿ ಅಧ್ಯಯನ ಮಾಡಲು ಮಲೇಷಿಯಾದ ಉಪ ಸಚಿವರ ನಿಯೋಗ ರಾಜ್ಯಕ್ಕೆ ಆಗಮಿಸಿದೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಅವರನ್ನು ಬುಧವಾರ ಭೇಟಿಯಾದ ನಿಯೋಗದಲ್ಲಿ ಮಲೇಷಿಯಾದ ಉಪ ಸಚಿವರಾದ ವೈ.ಬಿ.ಸನತೇರ್ ಪುವನ್, ಹಜಾಯ್ ಪುಜಿಯಾ, ಬಿನಿಟಿ ಸಲೇಹ್ ಕುಮಾರಕೃಪ ಅತಿಥಿ ಗೃಹದಲ್ಲಿ ಚರ್ಚೆ ನಡೆಸಿದರು.
ರಾಜ್ಯದ ಆಹಾರ ಇಲಾಖೆಯಲ್ಲಿ ಯಾವ ರೀತಿಯಾದ ವ್ಯವಸ್ಥೆಗಳಿಂದ ಗ್ರಾಹಕರಿಗೆ ಆಹಾರ ಪದಾರ್ಥಗಳನ್ನು ತಲುಪಿಸಲಾಗುತ್ತಿದೆ ಮತ್ತು ಪಡಿತರ ಕಾರ್ಡ್ ಗಳನ್ನು ಯಾವ ಮಾದರಿಯಾಗಿ ಜನರಿಗೆ ನೀಡುತ್ತೀರಾ? ಎಂಬ ಮಾಹಿತಿಗಳನ್ನು ಮಲೇಷಿಯಾ ಸರ್ಕಾರದ ನಿಯೋಗ ಪಡೆದುಕೊಂಡಿದೆ.
ರಾಜ್ಯಕ್ಕೆ ಭೇಟಿ ನೀಡಿರುವ ಮಲೇಷಿಯಾದ ಸಚಿವರ ನಿಯೋಗ ಪಡಿತರ ವ್ಯವಸ್ಥೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದೆ. ಇನ್ನೂ ಎರಡು ದಿನಗಳು ಬೆಂಗಳೂರಿನಲ್ಲಿಯೇ ಉಳಿಯಲಿದ್ದು ಅಕ್ಕಿಯ ದಾಸ್ತಾನು ಗೊಡೌನ್ ಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿ ಅವರ ದೇಶದಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸುಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…
ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…
ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…