ಬೆಂಗಳೂರು : ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ. ಇನ್ನು ಸಂಸದೀಯ ನಿಯಮಗಳ ಬಗ್ಗೆ ಅರಿವಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.
ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಉಸ್ತುವಾರಿ ಸಚಿವರು, ಅಲ್ಲಿನ ವ್ಯವಸ್ಥೆ ಸರಿಪಡಿಸುವುದು ಅವರ ಹೊಣೆಗಾರಿಕೆ.ಅಲ್ಲಿನ ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅವರದ್ದೇ ಜವಾಬ್ದಾರಿ. ಇಷ್ಟು ಸಾಮಾನ್ಯ ತಿಳುವಳಿಕೆ ಇಲ್ಲದಿರುವುದಕ್ಕಾಗಿಯೇ ಕಟೀಲ್ ಅವರನ್ನು ‘ಕಾಮಿಡಿ ಕಿಲಾಡಿ” ಎನ್ನುವುದು ಎಂದು ಟಾಂಗ್ ನೀಡಿದೆ.
ಕಟೀಲ್ ಅವರೇ ತಾವು ಅಧ್ಯಕ್ಷಗಿರಿಯನ್ನು ಬಿಎಲ್ ಸಂತೋಷ್ ಅವರ ಪಾದರಕ್ಷೆಗಳಿಗೆ ಲೀಸ್ ಗೆ ಕೊಟ್ಟಿದ್ದೀರಿ ಎಂದ ಮಾತ್ರಕ್ಕೆ ಬೇರೆಲ್ಲರೂ ಹಾಗೆಯೇ ಎಂದು ತಿಳಿಯುವುದು ಮೂರ್ಖತನ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…