BREAKING NEWS

ಕಾವೇರಿ ತವರಲ್ಲಿ ತಟ್ಟದ ಬಂದ್ ಬಿಸಿ

ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ ಬಂದ್‍ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.

ಜಿಲ್ಲೆಯಲ್ಲಿ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಕಾವೇರಿ ಬಂದ್ ಬಿಸಿ ತಟ್ಟದೆ ಕನ್ನಡ ಪರ ಹಾಗೂ ರೈತ ಸಂಘಟನೆಗಳಿಗೆ ಮಾತ್ರ ಪ್ರತಿಭಟನೆ ಸೀಮಿತವಾಗಿದೆ. ಮುಂಜಾನೆಯಿಂದಲೂ ಜಿಲ್ಲೆಯಲ್ಲಿ ಸಾರಿಗೆ, ಆಟೋ ಸಂಚಾರ, ಅಂಗಡಿ ಮುಗ್ಗಟ್ಟು, ವ್ಯಾಪಾರ – ವಹಿವಾಟು ಸೇರಿದಂತೆ ಜನ ಜೀವನ ಎಂದಿನಂತೆ ಸಾಗುತ್ತಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ.

11 ಗಂಟೆಯ ನಂತರ ಕೊಡಗು ಹಾಗೂ ಮೈಸೂರು ಗಡಿ ಭಾಗವಾದ ಕುಶಾಲನಗರದ ಕಾವೇರಿ ನದಿಯ ಬಳಿ ಕರ್ನಾಟಕ ಕಾವಲು ಪಡೆಯ ಕಾರ್ಯಕರ್ತರು ರೈತರು ಪ್ರತಿಭಟನೆ ಭಾಗಿಯಾಗಲ್ಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.

 

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

8 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

8 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

8 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

8 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

8 hours ago