ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್ ಕಂಟ್ರೋಲ್ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಬಿ ಟೀಂ ಆಡಳಿತ ನಡೆಸುತ್ತಿದೆ, ಬಿಎಆರ್‌ಎಸ್ ಅಂದರೆ ಬಿಜೆಪಿ ರಿಷ್ಟೇದಾರ್ ಸಮಿತಿ ಹೇಳುವ ಮೂಲಕ ವ್ಯಂಗ್ಯವಾಡಿದರು.
ಭ್ರಷ್ಟ ಮತ್ತು ಬಡವರ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೋರಾಡಿ ಜಯಗಳಿಸಿದೆ. ತೆಲಂಗಾಣದಲ್ಲಿ ಒಂದು ಬದಿ ರಾಜ್ಯದ ಶ್ರೀಮಂತರು, ಶಕ್ತಿಯುತರು ಇದ್ದರೆ, ಇನ್ನೊಂದು ಬದಿಯಲ್ಲಿ ನಮ್ಮೊಂದಿಗೆ ಬಡವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು, ರೈತರು ಮತ್ತು ಸಣ್ಣ ಅಂಗಡಿಯವರು ಇದ್ದಾರೆ. ಕರ್ನಾಟಕದ ಫಲಿತಾಂಶ, ತೆಲಂಗಾಣದಲ್ಲಿ ಪುನರಾವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿದರು.
ತೆಲಂಗಾಣದಲ್ಲಿ ಬಿಜೆಪಿ ಅಸ್ತಿತ್ವದಲ್ಲಿಲ್ಲ. ಅವರ ಎಲ್ಲಾ ನಾಲ್ಕು ಟಯರ್‌ಗಳು ಪಂಕ್ಚರ್ ಆಗಿವೆ. ಈಗ ಇದು ಕಾಂಗ್ರೆಸ್ ಮತ್ತು ಬಿಜೆಪಿಯ ಬಿ-ಟೀಮ್ ನಡುವೆ ನಡೆಯುವ ಜಗಳವಾಗಿದೆ. ಕಾಂಗ್ರೆಸ್ ಟಿಆರ್‌ಎಸ್‌ನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ. ಟಿಆರ್‌ಎಸ್ ಸಭೆಯಲ್ಲಿ ಭಾಗವಹಿಸದಂತೆ ನಾವು ಇತರ ಪಕ್ಷಗಳ ನಾಯಕರಿಗೆ ಹೇಳಿದ್ದೇವೆ ಎಂದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…