BREAKING NEWS

ಕೆಸಿಆರ್‌ ರಿಮೋಟ್‌ ಕಂಟ್ರೋಲ್‌ ಮೋದಿ ಬಳಿಯಿದೆ : ರಾಹುಲ್‌ ಗಾಂಧಿ

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್‌ ಕಂಟ್ರೋಲ್‌ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಬಿ ಟೀಂ ಆಡಳಿತ ನಡೆಸುತ್ತಿದೆ, ಬಿಎಆರ್‌ಎಸ್‌ ಅಂದರೆ ಬಿಜೆಪಿ ರಿಷ್ಟೇದಾರ್ ಸಮಿತಿ ಹೇಳುವ ಮೂಲಕ ವ್ಯಂಗ್ಯವಾಡಿದರು.

ಭ್ರಷ್ಟ ಮತ್ತು ಬಡವರ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೋರಾಡಿ ಜಯಗಳಿಸಿದೆ. ತೆಲಂಗಾಣದಲ್ಲಿ ಒಂದು ಬದಿ ರಾಜ್ಯದ ಶ್ರೀಮಂತರು, ಶಕ್ತಿಯುತರು ಇದ್ದರೆ, ಇನ್ನೊಂದು ಬದಿಯಲ್ಲಿ ನಮ್ಮೊಂದಿಗೆ ಬಡವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು, ರೈತರು ಮತ್ತು ಸಣ್ಣ ಅಂಗಡಿಯವರು ಇದ್ದಾರೆ. ಕರ್ನಾಟಕದ ಫಲಿತಾಂಶ, ತೆಲಂಗಾಣದಲ್ಲಿ ಪುನರಾವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿದರು.

ತೆಲಂಗಾಣದಲ್ಲಿ ಬಿಜೆಪಿ ಅಸ್ತಿತ್ವದಲ್ಲಿಲ್ಲ. ಅವರ ಎಲ್ಲಾ ನಾಲ್ಕು ಟಯರ್‌ಗಳು ಪಂಕ್ಚರ್ ಆಗಿವೆ. ಈಗ ಇದು ಕಾಂಗ್ರೆಸ್ ಮತ್ತು ಬಿಜೆಪಿಯ ಬಿ-ಟೀಮ್ ನಡುವೆ ನಡೆಯುವ ಜಗಳವಾಗಿದೆ. ಕಾಂಗ್ರೆಸ್ ಟಿಆರ್‌ಎಸ್‌ನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ. ಟಿಆರ್‌ಎಸ್ ಸಭೆಯಲ್ಲಿ ಭಾಗವಹಿಸದಂತೆ ನಾವು ಇತರ ಪಕ್ಷಗಳ ನಾಯಕರಿಗೆ ಹೇಳಿದ್ದೇವೆ ಎಂದರು.

lokesh

Recent Posts

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

8 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

1 hour ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

5 hours ago