BREAKING NEWS

ಕೆಇಎ ಪರೀಕ್ಷಾ ಅಕ್ರಮದ ರೂವಾರಿ ಆರ್.ಡಿ. ಪಾಟೀಲ್ ಬಂಧನ

ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಪ್ರಕರಣದಲ್ಲಿನ ಆರೋಪಿ ಆರ್.ಡಿ. ಪಾಟೀಲ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂರು ದಿನಗಳ ಹಿಂದೆ ಕಲಬುರಗಿಯ ವಾರ್ದಾ ಅಪಾರ್ಟ್‌ಮೆಂಟ್‌ ಒಂದರ ಗೋಡೆ ಹಾರಿ ಪರಾರಿಯಾಗಿದ್ದ ಆರೋಪಿಯನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ಕಲಬುರಗಿ ಗೆ ಕರೆತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಗೌಪ್ಯ ಜಾಗದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನ.10 ರಂದು ಜಾಮೀನು ಅರ್ಜಿ ವಿಚಾರಣೆಗೊಳಪಡಿಸಿ, ವಿಚಾರಣೆಯನ್ನು ಮುಂದಕ್ಕೆ ಹಾಕಿತ್ತು. ಗೌಪ್ಯ ಸ್ಥಳ ಭೇದಿಸಿದ ಪೊಲೀಸರು ಆರ್‌.ಡಿ ಪಾಟೀಲ್‌ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅ.29 ರಂದು ನಡೆಸಲಾಗಿದ್ದ ಕೆಇಎ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಿ ಉತ್ತರ ಬೆರಯುವಾಗ ಸಿಕ್ಕಿಬಿದ್ದಿದ್ದು, ಅದೊಂದು ದೊಡ್ಡ ಜಾಲವನ್ನೇ ಬಹಿರಂಗಪಡಿಸಿತ್ತು. ಈ ಜಾಲದ ಮುಖ್ಯ ರುವಾರಿ ಆರ್‌.ಟಿ.ಪಾಟೀಲ್‌ ಎಂಬುದು ಖಚಿತವಾಯಿತು. ಈ ಆರೋಪಿ ಪಿಎಸ್‌ಐ ಹಗರಣದಲ್ಲಿಯೂ ಶಾಮೀಲಾಗಿದ್ದು ಜಾಮೀನಿನ ಮೇಲೆ ಹೊರ ಬಂದಿದ್ದ.

 

andolanait

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

2 hours ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

2 hours ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

2 hours ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

3 hours ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

3 hours ago