ರುದ್ರಪ್ರಯಾಗ್: ಕೇದಾರನಾಥ ಯಾತ್ರೆ ಇದೇ 25ರಿಂದ ಆರಂಭಗೊಳ್ಳಲಿದ್ದು, ಈ ಬಾರಿ ದಿನವೊಂದಕ್ಕೆ 13 ಸಾವಿರ ಯಾತ್ರಿಕರ ಭೇಟಿಗಷ್ಟೇ ಅನುಮತಿ ನೀಡಲಾಗಿದೆ.
‘ಸರ್ಕಾರ ಈ ಬಾರಿ ಯಾತ್ರಾರ್ಥಿಗಳಿಗೆ ಟೋಕನ್ ವ್ಯವಸ್ಥೆಯನ್ನೂ ಪರಿಚಯಿಸಿದೆ. ಸುಗಮ ಯಾತ್ರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ರುದ್ರಪ್ರಯಾಗ್ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಸುದ್ದಿಗಾರರಿಗೆ ತಿಳಿಸಿದರು.
ಯಾತ್ರಿಕರ ಆರೋಗ್ಯದ ಸುರಕ್ಷತೆಗೆ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿದೆ. 22 ವೈದ್ಯರು ಸೇರಿದಂತೆ ಅಷ್ಟೇ ಸಂಖ್ಯೆಯ ಅರೆವೈದ್ಯಕೀಯ ಸಿಬ್ಬಂದಿಯನ್ನು ಯಾತ್ರಾ ಮಾರ್ಗದಲ್ಲಿ ನಿಯೋಜಿಸಲಾಗಿದೆ. 12 ವೈದ್ಯಕೀಯ ಶಿಬಿರ ತೆರೆಯಲಾಗಿದೆ. ಆರು ಆಂಬುಲೆನ್ಸ್‌ಗಳು ಕಾರ್ಯ ನಿರ್ವಹಿಸಲಿವೆ. ತುರ್ತು ನೆರವಿಗಾಗಿ ಏರ್ ಆಂಬುಲೆನ್ಸ್ ಸೇವೆಗೂ ಸರ್ಕಾರ ಅನುಮತಿ ನೀಡಿದೆ ಎಂದು ವಿವರಿಸಿದರು.
ಸುಲಭ್ ಇಂಟರ್‌ನ್ಯಾಷನಲ್ ಯಾತ್ರಾ ಮಾರ್ಗದ ಸ್ವಚ್ಛತೆಯ ಹೊಣೆ ಹೊತ್ತಿದೆ. ಕೇದಾರನಾಥ ನಗರ ಪಂಚಾಯಿತಿಯಿಂದ ದೇಗುಲದ ಆವರಣ, ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತಾ ನಿರ್ವಹಣೆ ನಡೆಯಲಿದೆ. ಯಾತ್ರಾರ್ಥಿಗಳಿಗೆ ಅಗತ್ಯ ಕುಡಿಯುವ ನೀರು ಪೂರೈಕೆಗೂ ಕ್ರಮವಹಿಸಲಾಗಿದೆ ಎಂದರು.
‘ಭದ್ರತೆಗಾಗಿ 450 ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಶಾಖ ಅಶೋಕ್ ಬದಾನೆ ಮಾಹಿತಿ ನೀಡಿದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…