BREAKING NEWS

ಕೇರಳ| ರೈಲು ಬೋಗಿಯೊಳಗೆ ಬೆಂಕಿ ಹಚ್ಚಿದ ಪ್ರಕರಣ: ತಪ್ಪೊಪ್ಪಿಕೊಂಡ ಆರೋಪಿ

ಕೋಯಿಕ್ಕೋಡ್‌: ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಪ್ರಮುಖ ಆರೋಪಿ ಶಾರೂಕ್‌ ಸೈಫಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ. ಆರ್. ಅಜಿತ್ ಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದರು.

‘ತಾನು ಅಪರಾಧ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ನಾವು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದೇವೆ. ಇಂಥ ಪ್ರಕರಣಗಳಲ್ಲಿ ಭಾಗಿಯಾಗುವ ಆರೋಪಿಗಳು ತಮ್ಮ ಉದ್ದೇಶವನ್ನು ಸಾಮಾನ್ಯವಾಗಿ ಬಹಿರಂಗಪಡಿಸುವುದಿಲ್ಲ. ವಿಚಾರಣೆ ದೀರ್ಘ ಪ್ರಕ್ರಿಯೆ’ ಎಂದು ಕುಮಾರ್ ಹೇಳಿದರು.

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸೆರೆಸಿಕ್ಕಿದ್ದ ಆರೋಪಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದುಕೊಂಡಿದೆ. ಕೋಯಿಕ್ಕೋಡ್‌ ವೈದ್ಯಕೀಯ ಮಂಡಳಿಯು ಆರೋಪಿಯು ದೈಹಿಕವಾಗಿ ಸದೃಢ ಎಂದು ಘೋಷಿಸಿದ ನಂತರ ಆತನನ್ನು ಪೊಲೀಸರು ಬಂಧಿಸಿದರು.

ಘಟನೆ ನಡೆದ ಪ್ರದೇಶದಲ್ಲಿ ಹಳಿಗಳ ಮೇಲೆ ಪುಸ್ತಕ ಮತ್ತು ಪೆಟ್ರೋಲ್ ಬಾಟಲಿಯಿದ್ದ ಬ್ಯಾಗ್‌ವೊಂದು ಪತ್ತೆಯಾಗಿದ್ದು, ಅದು ಆರೋಪಿಯದ್ದೇ ಆಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದರು.

ಅಲಪ್ಪುವ – ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಕೋರಪುವ ಎಂಬಲ್ಲಿ ಮೇಲ್ಸೇತುವೆ ಮೇಲೆ ಚಲಿಸುತ್ತಿದ್ದ ವೇಳೆ ಆರೋಪಿ ಬೋಗಿಯೊಂದರ ಪ್ರಯಾಣಿಕರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಇಟ್ಟಿದ್ದ. ಘಟನೆಯಲ್ಲಿ 9 ಮಂದಿ ಗಾಯಗೊಂಡರೆ, ಮೂವರು ಮೃತಪಟ್ಟಿದ್ದರು.

andolanait

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

5 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

5 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

5 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

5 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

5 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

5 hours ago