BREAKING NEWS

ಕೇರಳ: ಚಿಕಿತ್ಸೆ ನೀಡುವ ವೇಳೆ ವೈದ್ಯೆ ಮೇಲೆ ಕತ್ತರಿಯಿಂದ ಇರಿದು, ಹತ್ಯೆಗೈದ ವ್ಯಕ್ತಿ

ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿರುವುದು ವರದಿಯಾಗಿದೆ.

ಘಟನೆ ಹಿನ್ನೆಲೆ:  ಪುಯಪಲ್ಲಿ ಚೆರುಕರಕೋಣಂ ನಿವಾಸಿ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಸಂದೀಪ್ (42) ಎಂಬ ವ್ಯಕ್ತಿ ಪೊಲೀಸರ ತುರ್ತು ಸಂಖ್ಯೆಗೆ ʼನನ್ನನ್ನು ನನ್ನ ಕುಟುಂಬದಿಂದ ರಕ್ಷಿಸಿʼ ಎಂದು ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದ ವೇಳೆ ಕರೆ ಮಾಡಿದ್ದ ಸಂದೀಪ್‌ ಕಾಲಿಗೆ ಗಾಯ ಮಾಡಿಕೊಂಡಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು ಪೊಲೀಸರು ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ವೇಳೆ 22 ವರ್ಷದ ವಂದನಾ ದಾಸ್‌ ಎಂಬ ವೈದ್ಯೆಯೊಬ್ಬರು ಸಂದೀಪ್‌ ಅವರ ಗಾಯಗೊಂಡ ಕಾಲಿಗೆ ಬ್ಯಾಂಡೇಜ್‌ ಮಾಡಲು ಹೋಗಿದ್ದಾರೆ. ಬ್ಯಾಂಡೇಜ್‌ ಮಾಡುವಾಗ ಸಂದೀಪ್‌ ಇದ್ದಕ್ಕಿದ್ದಂತೆ ಅಲ್ಲೇ ಇದ್ದ ಕತ್ತರಿ ಮತ್ತು ಒಂದು ಚಿಕ್ಕಚಾಕುವಿನಿಂದ ವೈದ್ಯೆ ಮೇಲೆ ಹಲ್ಲೆ ಮಾಡಿದ್ದಾನೆ. ಜೀವ ಭಯದಿಂದ ಗಾಯಗೊಂಡು ಹೊರಬಂದ ವೈದ್ಯೆ ಕಾಪಾಡಿ ಎಂದಿದ್ದಾರೆ. ಸಿಟ್ಟಿನಲ್ಲಿದ್ದ ಸಂದೀಪ್‌ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಮತ್ತೆ ಹಲ್ಲೆಗೈದಿದ್ದಾನೆ.

ಆಸ್ಪತ್ರೆ ಕೋಣೆ ಹೊರಗಿದ್ದ ಪೊಲೀಸರು ಆತನನ್ನು ತಡೆಯಲು ಯತ್ನಿಸಿದ್ದಾಗ ಪೊಲೀಸರ ಮೇಲೂ ಹಲ್ಲೆಗೈದು, ಆಸ್ಪತ್ರೆಯ ಕೆಲ ಸಾಮಾಗ್ರಿಗಳನ್ನು ಪುಡಿಗೈದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ವೈದ್ಯೆಯನ್ನು ಹೆಚ್ಚಿನ ಚಿಕಿತ್ಸೆಗೆ ತಿರುವನಂತಪುರಂ ಆಸ್ಪತ್ರೆಗೆ ದಾಖಲು ಮಾಡಿದರೂ ಆಕೆ ಮೃತಪಟ್ಟಿದ್ದಾರೆ.

ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವೈದ್ಯೆಗೆ ಹಲ್ಲೆಗೈದು ಹತ್ಯೆ ಮಾಡಲು ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣವನ್ನು ಖಂಡಿಸಿ ಕೇರಳದಲ್ಲಿ ವೈದ್ಯರು ಪ್ರತಿಭಟನೆ ನಡೆಸಿ ಬೀದಿಗೆ ಇಳಿದಿದ್ದಾರೆ.

andolanait

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

2 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

3 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

3 hours ago