BREAKING NEWS

ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆ : ಜತೆಗಾತಿಯೂ ಆತ್ಮಹತ್ಯೆಗೆ ಯತ್ನ

ತಿರುವನಂತಪುರಂ : ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್‌ ಪ್ರವೀಣ್‌ ನಾಥ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಡೆದು ಕೆಲವೇ ಗಂಟೆಗಳ ಬಳಿಕ ಅವರ ಜತೆಗಾತಿ ಕೂಡಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪ್ರವೀಣ್ ನಾಥ್ ಅವರ ಪಾರ್ಟ್ನರ್‌ ರಿಶಾನಾ ಆಯೆಶಾ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಸ್ಥಿತಿ ಗಂಭೀರವಾಗಿದೆ.

ಟ್ರಾನ್ಸ್‌ಜೆಂಡರ್ ಬಾಡಿಬಿಲ್ಡರ್‌ ಅವರ ಜತೆಗಾತಿ ರಿಶಾನಾ ಆಯೆಶ್‌ ಓರ್ವ ಮಾಡೆಲ್ ಆಗಿ ಗುರುತಿಸಿಕೊಂಡಿದ್ದು, ಅವರು ಕೂಡಾ ಆತ್ಮಹತ್ಯಗೆ ಯತ್ನಿಸಿದ್ದಾರೆ. ಇದೀಗ ರಿಶಾನಾ ಅವರನ್ನು ತ್ರಿಶೂರ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಪರಿಸ್ಥಿತಿ ಕೂಡಾ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಪ್ರವೀಣ್ ನಾಥ್ ಅವರು ಗುರುವಾರವಷ್ಟೇ ತಮ್ಮ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಇಬ್ಬರ ಮೇಲೆ ಇತ್ತೀಚೆಗಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸೈಬರ್‌ದಾಳಿಯಿಂದಾಗಿ ನಿರಾಸೆ ಹಾಗೂ ಅವಮಾನಕ್ಕೊಳಗಾಗಿದ್ದರು. ಈ ಕಾರಣಕ್ಕಾಗಿಯೇ ಈ ಘಟನೆ ಸಂಭವಿಸಿದೆ ಎಂದು ತೃತೀಯಲಿಂಗಿ ಸಮುದಾಯದವರು ಆರೋಪಿಸಿದ್ದಾರೆ. ಪ್ರವೀಣ್ ನಾಥ್ ಅವರು ರಿಶಾನ್‌ ಅವರನ್ನು ಫೆಬ್ರವರಿ 14ರ ಪ್ರೇಮಿಗಳ ದಿನದಂದೇ ವಿವಾಹವಾಗಿದ್ದರು. ಇದರ ಬೆನ್ನಲ್ಲೇ ಹಲವಾರು ಮಂದಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸೈಬರ್‌ಅಟ್ಯಾಕ್‌ ಮಾಡಿದ್ದರು. ಇದರಿಂದ ಬೇಸತ್ತು ಈ ಜೋಡಿ ಸೋಷಿಯಲ್ ಮೀಡಿಯಾದಿಂದ ಹೊರಬಂದಿದ್ದರು.

ಈ ದಂಪತಿಗಳು ಬೇರೆ-ಬೇರೆಯಾಗುತ್ತಿದ್ದಾರೆ ಎಂದು ಪೋಸ್ಟರ್‌ ಒಂದು ಹರಿದಾಡುತ್ತಿತ್ತು. ಈ ಪೋಸ್ಟ್ ನೋಡಿದ ಬಳಿಕ ನಾನಂತೂ ಭಾವನಾತ್ಮಕವಾಗಿ ಕುಸಿದು ಹೋಗಿದ್ದೇನೆ. ನಾನು ಆ ಪೋಸ್ಟ್ ಡಿಲೀಟ್ ಮಾಡಿದ್ದರೂ ಸಹಾ, ಅದರ ಸ್ಕ್ರೀನ್‌ಶಾಟ್‌ ಬೇರೆ ಬೇರೆ ಕಡೆ ಹರಿದಾಡುತ್ತಿದೆ ಎಂದು ಪ್ರವೀಣ್‌ ನಾಥ್ ತಾವು ಆತ್ಮಹತ್ಯೆ ಮಾಡಿಕೊಳ್ಳುವ ಎರಡು ದಿನ ಮುಂಚೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಈ ಜೋಡಿಯು 2020ರಲ್ಲಿ ತ್ರಿಶೂರ್‌ನಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಕ್ಕಾಗಿ ನಡೆದ ಸಮಾವೇಶದಲ್ಲಿ ಈ ಜೋಡಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಇದಾದ ಬಳಿಕ ಈ ಇಬ್ಬರ ನಡುವೆ ಪ್ರೇಮಾಂಕುರ ಬೆಳೆದು ವ್ಯಾಲೆಂಟೈನ್ ಡೇ ದಿನದಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.

lokesh

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

13 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago