ಚಂಡೀಗಢ : ಪ್ರತ್ಯೇಕ ಖಾಲಿಸ್ತಾನ ಪ್ರತಿಪಾದಕ, ಸಿಖ್ ಧರ್ಮ ಪ್ರಚಾರಕ ಅಮೃತ್‌ಪಾಲ್ ಸಿಂಗ್‌ನ ಸಹಚರ ಪಪಲ್ಪ್ರೀತ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್‌ನ ಹೋಶಿಯಾರ್‌ಪುರದಲ್ಲಿನ ಡೇರಾದಲ್ಲಿ ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ಇದೇ ಡೇರಾದಲ್ಲಿ ಪಪಲ್ಪ್ರೀತ್ ಸಿಂಗ್ ಇರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿದ್ದವು.
ಪಪಲ್ಪ್ರೀತ್ ಸಿಂಗ್‌ನ ಬಂಧನವಾಗಿದ್ದು ಕೆಲ ದಿನಗಳಲ್ಲಿ ಅಮೃತ್‌ಪಾಲ್ ಸಿಂಗ್ ಬಂಧನವಾಗಬಹುದು ಎಂದು ಪಂಜಾಬ್ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಪರಾರಿಯಾದ ಅಮೃತಪಾಲ್ ಸಿಂಗ್ ಮತ್ತು ಆತನ ಸಹಾಯಕರು ಜಲಂಧರ್, ಹೋಶಿಯಾರ್‌ಪುರ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದ ಡೇರಾಗಳಲ್ಲಿ ಆಶ್ರಯ ಪಡೆದಿದ್ದರು. ಅಮೃತಪಾಲ್ ಮತ್ತು ಪಪಲ್ಪ್ರೀತ್ ಸಿಂಗ್ ಫಗ್ವಾರಾ ಪಟ್ಟಣ, ನಾದ್ಲೋನ್ ಮತ್ತು ಬೀಬಿ ಗ್ರಾಮದ ಮೂರು ವಿಭಿನ್ನ ಡೇರಾಗಳಲ್ಲಿ ತಂಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾರ್ಚ್ 18ರಿಂದ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಮೃತಪಾಲ್ ಸಿಂಗ್‌ನ ನೂರಾರು ಬೆಂಬಲಿಗರನ್ನು ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…