Mysore
25
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಭಾರತಕ್ಕೆ ಬೇಕಾಗಿದ್ದ ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದಲ್ಲಿ ಹತ್ಯೆ

ನವದೆಹಲಿ : ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಸರ್ಕಾರಕ್ಕೆ ಬೇಕಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತನಾಗಿದ್ದಾನೆ. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದ ಗುರು ನಾನಕ್ ಸಿಖ್ ಗುರುದ್ವಾರದ ಬಳಿ ಹರ್ದೀಪ್ ಸಿಂಗ್ ನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಖಲಿಸ್ತಾನಿ ಪರ ಸಂಘಟನೆಯಾದ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥ ನಿಜ್ಜರ್, ಗುರ್ಪತ್‌ವಂತ್ ಸಿಂಗ್ ಪನ್ನುನ್ ನಡೆಸುತ್ತಿರುವ ‘ಸಿಖ್ಸ್ ಫಾರ್ ಜಸ್ಟಿಸ್’ (ಎಸ್‌ಎಫ್‌ಜೆ) ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಅಜೆಂಡಾವನ್ನು ಉತ್ತೇಜಿಸುವ ಜವಾಬ್ದಾರಿಯನ್ನು ಹೊಂದಿದ್ದ. ಈ ಹಿಂದೆ, ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನಿಜ್ಜರ್ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು.

ಇತ್ತೀಚೆಗೆ, ಭಾರತ ಸರ್ಕಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ನಿಜ್ಜರ್‌ನ ಹೆಸರನ್ನು ಸೇರಿಸಲಾಗಿದ್ದು, ಇತರ 40 ನಿಯೋಜಿತ ಭಯೋತ್ಪಾದಕರನ್ನು ಹೆಸರಿಸಿದೆ.

2022 ರಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ನಂತರ ನಿಜ್ಜರ್‌ ನನ್ನು ಹಿಡಿದು ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!