ಮಡಿಕೇರಿ: ಮಡಿಕೇರಿ-ಮಂಗಳೂರು ಹೆದ್ದಾರಿಯ ಸಂಪಾಜೆ ಪೆಟ್ರೋಲ್ ಪಂಪ್ ಬಳೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.
ಸ್ವಿಫ್ಟ್ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರೆ ಬಸ್ಸು ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿತ್ತು. ಕಾರಿನಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದರು.
ಕಾರಿನಲ್ಲಿದ್ದವರೆಲ್ಲ ಮೂಲತಃ ಮಂಡ್ಯ ಜಿಲ್ಲೆಯವರು. ಅವರು ಎಲ್ಲಿಗೆ ಹೋಗುತ್ತಿದ್ದರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ದ.ಕನ್ನಡ ಜಿಲ್ಲೆಯ ಸುಳ್ಯ ಕೆವಿಜಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…