BREAKING NEWS

ಹೆಡ್ಗೆವಾರ್,ಸಾವರ್ಕರ್ ಪಠ್ಯಕ್ಕೆ ಕೊಕ್: ನೆಹರು ವಿಚಾರ ಸೇರ್ಪಡೆ

ಬೆಂಗಳೂರು : ಪಠ್ಯ ಪುಸ್ತಕದಲ್ಲಿರುವ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ವಿಷಯಗಳನ್ನು ಕೈಬಿಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಕೆಲ ಬದಲಾವಣೆ ಮಾಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಇಂದಿರಾ ಗಾಂಧಿ ಅವರಿಗೆ ಬರೆದ ಪತ್ರ ‘ನೀ ಬರೆದ ಪತ್ರ’, ಸಾವಿತ್ರಿ ಬಾಯಿ ಪುಲೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯವನ್ನು ಮರು ಸೇರ್ಪಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚಕ್ರವರ್ತಿ ಸೂಲಿಬೆಲೆ ಅವರು ಬರೆದಿರುವ ರಾಜಗುರು, ಭಗತ್ ಸಿಂಗ್ ಮತ್ತು ಸುಖದೇವ್ ಅವರ ಕುರಿತಾಗಿರುವ ಪಠ್ಯವನ್ನು ಕೈಬಿಡಲು ತೀರ್ಮಾನಿಸಲಾಗಿದೆ.

8ನೇ ತರಗತಿ ಕನ್ನಡ ವಿಷಯದಲ್ಲಿ ಕೆ.ಟಿ.ಗಟ್ಟಿ ಅವರು ಬರೆದಿದ್ದ ಸಾವರ್ಕರ್ ಅವರನ್ನು ಬಂಧಿಸಿಟ್ಟಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಕುರಿತು ಬರೆದಿದ್ದ ಪ್ರವಾಸ ಕಥನ ಆಧಾರಿತ ‘ಕಾಲವನ್ನು ಗೆದ್ದವರು’ ಪಾಠವನ್ನು ಸೇರಿಸಲಾಗಿತ್ತು. ಈಗ ಕಾಂಗ್ರೆಸ್ ಸರಕಾರ ಆ ಪಠ್ಯವನ್ನು ಕೈಬಿಡಲು ತೀರ್ಮಾನಿಸಿದೆ.

10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಅವರ ಭಾಷಣದ ತುಣುಕನ್ನು ಒಂದು ಅಧ್ಯಾಯವಾಗಿ ಸೇರ್ಪಡೆ ಮಾಡಲಾಗಿತ್ತು, ಅದನ್ನೂ ಈಗ ಕೈ ಬಿಡಲಾಗುತ್ತಿದೆ.

andolanait

Recent Posts

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

17 mins ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

31 mins ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

49 mins ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

59 mins ago

ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಧರಣಿಗೆ ಕರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…

1 hour ago

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…

1 hour ago