ಕೋಲಾರ: ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪವೆಸಗಿದ ಹಿನ್ನೆಲೆ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಪಿ.ಜೆ.ಮಧುಕರ್ನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಭಾನುವಾರ ಆದೇಶ ಹೊರಡಿಸಿದ್ದಾರೆ.
ಜೂನ್ 27ರಂದು ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿತ್ತು. ಮರ್ಯಾದಾ ಹತ್ಯೆ ಪ್ರಕರಣದ ತನಿಖೆಯಲ್ಲಿ ಸಿಪಿಐ ಲೋಪವೆಸಗಿದ್ದರು. ಕಾಮಸಮುದ್ರ ಸಿಪಿಐ ಮಧುಕರ್ ಅಮಾನತುಗೊಳಿಸಿ ಐಜಿಪಿ ಆದೇಶ ಹೊರಡಿಸಲಾಗಿದೆ.
ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಕುತ್ತಿಗೆ ಹಿಸುಕಿ ಸಾಯಿಸಿದ್ದಾನೆ. ಇತ್ತ ತಾನು ಪ್ರೀಸಿದ ಹುಡುಗಿ ಮೃತಪಟ್ಟಿದ್ದಾಳೆ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಗಾಬರಿಗೊಂಡ ಯುವಕ ತಾನೂ ಕೂಡ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ.
ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೃಷ್ಣಮೂರ್ತಿ ಎಂಬುವರ ಮಗಳು ಕೀರ್ತಿ (20) ಕೆಜಿಎಫ್ನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದಳು. ಅದೇ ಗ್ರಾಮದ ಪರಿಶಿಷ್ಟ ಜನಾಂಗಕ್ಕೆ ಸೇರಿದ ಗಂಗಾಧರ್ ಎಂಬ ಯುವಕನನ್ನು ಇತ್ತೀಚೆಗೆ ಪ್ರೀತಿಸುತ್ತಿದ್ದಾಳೆ ಎನ್ನುವ ವಿಚಾರ ಗ್ರಾಮದಲ್ಲಿ ತಿಳಿದಿತ್ತು.
ಈ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಅಲ್ಲದೆ ಯುವತಿಗೆ ಬುದ್ದಿ ಹೇಳುವ ಕೆಲಸ ಕೂಡ ನಡೆದಿತ್ತಾದರೂ ಯವತಿ ತಂದೆ ತಾಯಿಯ ಮಾತನ್ನು ಧಿಕ್ಕರಿಸಿ ಆತನನ್ನೇ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಹಾಗಾಗಿ ಯುವತಿ ತಂದೆ ಕೃಷ್ಣಮೂರ್ತಿ ಮಗಳನ್ನು ಕುತ್ತಿಗೆ ಹಿಸುಕಿ ಸಾಯಿಸಿದ್ದರು.
ತಾನು ಪ್ರೀತಿಸುತ್ತಿದ್ದ ಹುಡುಗಿ ಮೃತಪಟ್ಟ ವಿಚಾರ ತಿಳಿದು ಗಾಬರಿಗೊಂಡ ಯುವಕ, ಓಡಿ ಹೋಗಿ ಕಾಮಸಮುದ್ರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ತಾನು ಆತ್ಮಹತ್ಯೆಗೆ ಶರಣಾಗಿದ್ದ. ವಿಷಯ ತಿಳಿದು ಗ್ರಾಮಕ್ಕೆ ಬೇಟಿ ನೀಡಿರುವ ಕಾಮಸಮುದ್ರ ಪೊಲೀಸರು ಆರೋಪಿ ಕೃಷ್ಣಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…