ಬೆಂಗಳೂರು : ತಮಿಳು ನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ ಅಣ್ಣಾಮಲೈ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ರಾಜ್ಯದಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ಅಣ್ಣಾಮಲೈ ಪ್ರಭಾವ ಬೀರಲು ನೋಡಬಹುದು ಎಂದು ಕೆಪಿಸಿಸಿ ತನ್ನ ದೂರಿನಲ್ಲಿ ಪ್ರಸ್ತಾಪಿಸಿದೆ.
ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ (KPCC) ವಕ್ತಾರ ನಟರಾಜ್ ಗೌಡ, ಅಣ್ಣಾಮಲೈ ಅವರು ತಮ್ಮ ವರ್ಚಸ್ಸು ಬಳಸಿಕೊಂಡು ಹಣ ಸಾಗಾಣಿಕೆ ಮಾಡಬಹುದು ಚುನಾವಣಾ ಅಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ನಮ್ಮ ಕಾಂಗ್ರೆಸ್ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.
ಮಾಜಿ ಐಪಿಎಸ್ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್‌ಮೇಟ್‌ಗಳು ಕರ್ತವ್ಯ ಮಾಡುತ್ತಿದ್ದಾರೆ.
ಐಪಿಎಸ್ ಅಧಿಕಾರಿಗಳು, ಪೊಲೀಸರ ಪರಿಚಯ ಇರುವ ಕಾರಣ ಅಧಿಕಾರ ದುರ್ಬಳಕೆಯಾಗುವ ಸಾಧ್ಯತೆಯಿದೆ. ಅಣ್ಣಾಮಲೈ ಅವರು ರಾಜ್ಯವಾಪಿ ಓಡಾಟ ನಡೆಸುವುದರಿಂದ ಅವರ ವಾಹನದಲ್ಲಿ ಹಣ ಸಾಗಾಟ ಮಾಡುವ ಸಾಧ್ಯತೆಯಿದೆ. ಇಲ್ಲಿಯವರೆಗೆ ಅವರ ವಾಹನವನ್ನು ಪರಿಶೀಲಿಸಿಲ್ಲ. ಈ ಕಾರಣಕ್ಕೆ ಚುನಾವಣೆ ಮುಗಿಯವವರೆಗೂ ಅವರ ಕರ್ನಾಟಕ ಪ್ರವಾಸಕ್ಕೆ ಅನುಮತಿ ನೀಡಿದ್ದನ್ನು ರದ್ದು ಪಡಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…