BREAKING NEWS

ತಮಿಳು ನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು

ಬೆಂಗಳೂರು : ತಮಿಳು ನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ ಅಣ್ಣಾಮಲೈ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಜ್ಯದಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ಅಣ್ಣಾಮಲೈ ಪ್ರಭಾವ ಬೀರಲು ನೋಡಬಹುದು ಎಂದು ಕೆಪಿಸಿಸಿ ತನ್ನ ದೂರಿನಲ್ಲಿ ಪ್ರಸ್ತಾಪಿಸಿದೆ.

ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ (KPCC) ವಕ್ತಾರ ನಟರಾಜ್‌ ಗೌಡ, ಅಣ್ಣಾಮಲೈ ಅವರು ತಮ್ಮ ವರ್ಚಸ್ಸು ಬಳಸಿಕೊಂಡು ಹಣ ಸಾಗಾಣಿಕೆ ಮಾಡಬಹುದು ಚುನಾವಣಾ ಅಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ನಮ್ಮ ಕಾಂಗ್ರೆಸ್‌ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.

ಮಾಜಿ ಐಪಿಎಸ್‌ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್‌ಮೇಟ್‌ಗಳು ಕರ್ತವ್ಯ ಮಾಡುತ್ತಿದ್ದಾರೆ.

ಐಪಿಎಸ್‌ ಅಧಿಕಾರಿಗಳು, ಪೊಲೀಸರ ಪರಿಚಯ ಇರುವ ಕಾರಣ ಅಧಿಕಾರ ದುರ್ಬಳಕೆಯಾಗುವ ಸಾಧ್ಯತೆಯಿದೆ. ಅಣ್ಣಾಮಲೈ ಅವರು ರಾಜ್ಯವಾಪಿ ಓಡಾಟ ನಡೆಸುವುದರಿಂದ ಅವರ ವಾಹನದಲ್ಲಿ ಹಣ ಸಾಗಾಟ ಮಾಡುವ ಸಾಧ್ಯತೆಯಿದೆ. ಇಲ್ಲಿಯವರೆಗೆ ಅವರ ವಾಹನವನ್ನು ಪರಿಶೀಲಿಸಿಲ್ಲ. ಈ ಕಾರಣಕ್ಕೆ ಚುನಾವಣೆ ಮುಗಿಯವವರೆಗೂ ಅವರ ಕರ್ನಾಟಕ ಪ್ರವಾಸಕ್ಕೆ ಅನುಮತಿ ನೀಡಿದ್ದನ್ನು ರದ್ದು ಪಡಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

lokesh

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

10 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

10 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

17 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

17 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

17 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

17 hours ago