Mysore
22
overcast clouds
Light
Dark

ಪ್ರೊ. ಎಂ. ಎಚ್. ಕೃಷ್ಣಯ್ಯ ಇನ್ನಿಲ್ಲ

ಮೈಸೂರು :ಕನ್ನಡ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊಫೆಸರ್ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ.

ಕೃಷ್ಣಯ್ಯ ಅವರು ಇಂದು ಮಧ್ಯಾಹ್ನ ಒಂದು ಗಂಟೆ ವೇಳೆಗೆ ನಿಧನರಾಗಿತ್ತು ಅವರ ಅಂತ್ಯ ಸಂಸ್ಕಾರವು ಗಾಯತ್ರಿ ನಗರದ ಹರಿಶ್ಚಂದ್ರ ಘಾಟಿನಲ್ಲಿ 11 ಗಂಟೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಕೃಷ್ಣಯ್ಯ ಅವರು ಕನ್ನಡ ಸಾಹಿತ್ಯ ಪೋಷಕರಾಗಿ ಕನ್ನಡ ಸಾಹಿತ್ಯ ಅಕಾಡೆಮಿ ಒಳಗೊಂಡಂತೆ ಹಲವಾರು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರ. ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್, ಸಾಹಿತ್ಯ ಸಾಂಸ್ಕೃತಿಕ ಲೋಕದಲ್ಲಿ ಮಹತ್ವವಾದ ಸೇವೆ ಸಲ್ಲಿಸಿರುವ ಕೃಷ್ಣಯ್ಯ ಅವರು ಸರಳ ಸಜ್ಜನಿಕೆಗೆ ಹೆಸರುವಾಸಿಯಾಗಿದ್ದರು. ಇವರಿಗೆ ಶೃಂಗಾರ ಲಹರಿಗೆ ಲಲಿತ ಕಲಾ ಅಕಾಡೆಮಿ ಪುರಸ್ಕಾರ, ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ.

ಕೃಷ್ಣಯ್ಯ ಅವರು ಜುಲೈ 21 1937 ರಲ್ಲಿ ಮೈಸೂರಿನಲ್ಲಿ ಜನಿಸಿದರು. ತಂದೆ ಹುಚ್ಚಯ್ಯ, ತಾಯಿ ಕೆಂಪಮ್ಮ, ಮೈಸೂರು ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿಗಳನ್ನು ಪಡೆದ ಕೃಷ್ಣಯ್ಯ ಅವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ ,ಮಂಗಳೂರು, ಮಾಗಡಿ ಮುಂತಾದ ಕಡೆಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದರು.

ಉದಯ ಬಾನು ಕಲಾ ಸಂಘವು ತನ್ನ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಕೊರತಂದ ಸುಮಾರು 3000 ಪುಟಗಳ ಬೆಂಗಳೂರು ದರ್ಶನ ಬೃಹತ್ ಸಂಪುಟಗಳ ಸಂಪಾದಕರಾಗಿಯೂ ಸಹ ತಮ್ಮ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ.

ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ನಿವೃತ್ತ ಪ್ರಾಧ್ಯಾಪಕರು ಕೂಡ ಆಗಿದ್ದರು. 30ಕ್ಕಿಂತಲೂ ಅಧಿಕ ಕೃತಿಗಳನ್ನು ಪ್ರಕಟಿಸಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ