ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕೆ.ಎಸ್ ಆರ್ ಟಿ.ಸಿ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ವೈಯಕ್ತಿಕ ಕಾರಣವೇ ಹೊರತು ರಾಜಕೀಯ ಒತ್ತಡ ಅಥವಾ ಪ್ರಚೋದನೆ ಇಲ್ಲ ಎಂದು ಸಿಐಡಿ ವರದಿ ನೀಡಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ವಹಿಸಲಾಗಿತ್ತು. ಸದನದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಸಚಿವ ಚೆಲುವರಾಯಸ್ವಾಮಿ ನಡುವಿನ ವಾಗ್ಯುದ್ಧಕ್ಕೂ ಕಾರಣವಾಗಿತ್ತು.
ಈ ಬಗ್ಗೆ ಸಿಐಡಿ ತನಿಖಾ ತಂಡದ ವರದಿಯ ವಿವರವನ್ನು ಸದನದಲ್ಲಿ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, 38 ಸಾಕ್ಷಿಗಳನ್ನು ಸಿಐಡಿ ತನಿಖಾ ತಂಡ ವಿಚಾರಣೆ ನಡೆಸಿತ್ತು. ಇದು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಯತ್ನ ಎಂದು ಸಿಐಡಿ ವರದಿ ನೀಡಿದೆ. ಯಾವುದೇ ರಾಜಕೀಯ, ಮಾನಸಿಕ ಒತ್ತಡದಿಂದಲ್ಲ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದರು.
ವರ್ಗಾವಣೆ ರದ್ದು ಪಡಿಸಲು ಒತ್ತಡ ಹೇರುವ ನಿಟ್ಟಿನಲ್ಲಿ ಕೀಟನಾಶಕ ಸೇವನೆಯನ್ನು ಚಾಲಕ ಮಾಡಿದ್ದಾನೆ.
ಚಾಲಕ ಜಗದೀಶ್ ಹಾಗೂ ಸುಸೈಡ್ ನೋಟ್ ಬರೆದು ಕೊಟ್ಟ ಚಾಲಕ ನವೀನ್ ಕುಮಾರ್ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ.
ಸಹಾಯಕ ಕಾರ್ಯ ಅಧೀಕ್ಷಕ ಮಂಜುನಾಥ್ ಎಸ್ ಎಲ್ ವಿರುದ್ಧ ಇಲಾಖೆ ಶಿಸ್ತು ಕ್ರಮಕ್ಕೆ ತನಿಖಾ ತಂಡ ಶಿಫಾರಸು ಮಾಡಿದೆ. ಚಾಲಕ ಇದ್ದ ಆಂಬ್ಯುಲೆನ್ಸ್ ತಡೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿಐಡಿ ಶಿಪಾರಸು ಮಾಡಿದೆ ಎಂದು ಸದನಕ್ಕೆ ತಿಳಿಸಿದರು. ಹಾಗೂ ಈ ಬಗ್ಗೆ ಕ್ರಮ ಕೈಗೊಳ್ಳದ ಠಾಣಾಧಿಕಾರಿ ಅಶೋಕ್ ಕುಮಾರ್ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡಿದೆ ಎಂದು ಮಾಹಿತಿಯನ್ನು ನೀಡಿದರು.
ಆದರೆ ವರದಿ ಬಗ್ಗೆ ಕಾಂಗ್ರೆಸ್ ಸದಸ್ಯ ನರೇಂದ್ರ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿ,ವರದಿ ನ್ಯಾಯೋಚಿತವಾಗಿಲ್ಲ.ಇದರಲ್ಲಿ ಯಾರನ್ನೋ ರಕ್ಷಣೆ ಮಾಡುವ ಉದ್ದೇಶ ಇದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ಶಾಸಕರ ಮಾನ ಮರ್ಯಾದೆ ಕಳೆದಿದ್ದಾರೆ. ಕುಮಾರಸ್ವಾಮಿ ಏನು ದೇವರಾ? ಅವರ ಬಗ್ಗೆ ನಾವು ಮಾತನಾಡಬಾರದಾ? ಅವರು ಮಾಜಿ ಸಿಎಂ ಎಂದು ನಮಗೂ ಗೌರವ ಇದೆ. ಆದರೆ ಇಲ್ಲಸಲ್ಲದ ಆರೋಪ ಮಾಡಿದರೆ ಹೇಗೆ? ನಾವು ಹೇಗೆ ತಡೆದುಕೊಳ್ಳಬೇಕು? ವರದಿಯಲ್ಲಿ ಅಧಿಕಾರಿಗಳು ಯಾರನ್ನೂ ಉಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…