ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನಿಶ್ಚಿತವಾಗಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕುಮಾರಣ್ಣ ಗೆಲುವು ಸಾಧಿಸುವ ಮೂಲಕ ಕೇಂದ್ರದಲ್ಲಿ ಒಳ್ಳೆಯ ಖಾತೆಯನ್ನು ಪಡೆದು ಸಚಿವರಾಗುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.
ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರಗಳಿಗೆ ಕುಮಾರಣ್ಣ ಅವರ ಮೂಖಾಂತರ ಕೇಂದ್ರದಿಂದ ಸ್ಪಂದನೆ ಸಿಗುತ್ತದೆ ಎಂಬ ವಿಶ್ವಾಸವೂ ಇದೆ ಎಂದರು.
ಅಂಬರೀಶ್ ಅವರ ನಂತರ ಕೇಂದ್ರ ಸಚಿವ ಸ್ಥಾನ ಮಂಡ್ಯಕ್ಕೆ ಸಿಕ್ಕಿರಲಿಲ್ಲ. ಈ ಬಾರಿ ಕುಮಾರಣ್ಣನ ಮೂಲಕ ಮಂಡ್ಯಕ್ಕೆಕೇಂದ್ರ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದರು ತಿಳಿಸಿದರು.
ಅಲ್ಲದೇ ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಕಾಂಗ್ರೆಸ್ ಸೋಲಲಿದೆ ಎಂದೂ ಸಹ ಪ್ರತಾಪ್ ಸಿಂಹ ತಿಳಿಸಿದರು.





