BREAKING NEWS

ಚುನಾವಣೆಯಲ್ಲಿ ಕುಮಾರಣ್ಣ ಗೆದ್ದು ಮಂತ್ರಿ ಆಗುತ್ತಾರೆ : ಪ್ರತಾಪ್‌ ಸಿಂಹ !

ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನಿಶ್ಚಿತವಾಗಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕುಮಾರಣ್ಣ ಗೆಲುವು ಸಾಧಿಸುವ ಮೂಲಕ ಕೇಂದ್ರದಲ್ಲಿ ಒಳ್ಳೆಯ ಖಾತೆಯನ್ನು ಪಡೆದು ಸಚಿವರಾಗುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.

ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರಗಳಿಗೆ ಕುಮಾರಣ್ಣ ಅವರ ಮೂಖಾಂತರ ಕೇಂದ್ರದಿಂದ ಸ್ಪಂದನೆ ಸಿಗುತ್ತದೆ ಎಂಬ ವಿಶ್ವಾಸವೂ ಇದೆ ಎಂದರು.

ಅಂಬರೀಶ್‌ ಅವರ ನಂತರ  ಕೇಂದ್ರ ಸಚಿವ ಸ್ಥಾನ ಮಂಡ್ಯಕ್ಕೆ ಸಿಕ್ಕಿರಲಿಲ್ಲ. ಈ ಬಾರಿ ಕುಮಾರಣ್ಣನ ಮೂಲಕ ಮಂಡ್ಯಕ್ಕೆಕೇಂದ್ರ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದರು ತಿಳಿಸಿದರು.

ಅಲ್ಲದೇ ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಕಾಂಗ್ರೆಸ್‌ ಸೋಲಲಿದೆ ಎಂದೂ ಸಹ ಪ್ರತಾಪ್‌ ಸಿಂಹ ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

8 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

8 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

12 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago