ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡುತ್ತಿರುವ ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಗೋವಿಂದಯ್ಯ ಯತೀಶ್ ಅವರು, ಕುಮಾರಸ್ವಾಮಿಯವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡಿದ್ದಾರೆ.
ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದರು. ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಐಸಿಯುಗೆ ದಾಖಲಿಸಲಾಗಿತ್ತು. ನಂತರ ನರರೋಗ ತಜ್ಞ ಡಾ.ಪಿ.ಸತೀಶ್ ಚಂದ್ರ ಮತ್ತು ಅವರ ತಂಡ ಚಿಕಿತ್ಸೆ ನೀಡಲು ಆರಂಭಿಸಿತು.
ಗೋಲ್ಡನ್ ಅವರ್ ಒಳಗೆ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕುಮಾರಸ್ವಾಮಿಯವರಿಗೆ ಮಿದುಳಿನ ಬಲಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಚಿಕಿತ್ಸೆ ನೀಡಲಾಗಿತ್ತು. ಶೀಘ್ರಗತಿಯಲ್ಲಿ ಗುಣಮುಖರಾಗುತ್ತಿದ್ದಾರೆ. ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…