Breaking: ಚಾಮರಾಜನಗರ ಕೆವಿಕೆಯ 15 ಬಿಎಸ್ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು!

ಚಾಮರಾಜನಗರ: ನಗರದ ಹೊರವಲಯದ ಹರದನಹಳ್ಳಿ ಬಳಿ ಕೃಷಿ ವಿಜ್ಞಾನ ಕೇಂದ್ರ 15 ವಿದ್ಯಾರ್ಥಿಗಳಿಗೆ ಗುರುವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತ ವಿದ್ಯಾರ್ಥಿಗಳನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೃಷಿ ಕಾಲೇಜಿನಲ್ಲಿ ರಾಜ್ಯದ ವಿವಿಧ ಭಾಗಗಳ 60 ವಿದ್ಯಾರ್ಥಿಗಳು ಬಿಎಸ್ಸಿ ಅಧ್ಯಯನ ಮಾಡುತ್ತಿದ್ದು, ಅವರ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಹಾಗೂ 11 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದ್ದು, ಇನ್ನು 40 ಮಂದಿ ವಿದ್ಯಾರ್ಥಿಗಳ ಫಲಿತಾಂಶ ಬರಬೇಕಿದೆ.

ಕಾಲೇಜಿನ 12 ಬೋಧಕ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಕೋವಿಡ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜು ಆವರಣವನ್ನು ಕಂಟೋನ್ಮೆಂಟ್ ಪ್ರದೇಶ ಮಾಡಲು ನಿರ್ಧರಿಸಲಾಗಿದ್ದು, ಬುಧವಾರದಿಂದಲೇ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಆನ್ ಲೈನ್ ಮೂಲಕ ಪಾಠ ನಡೆಯುತ್ತಿದೆ. ವಿದ್ಯಾರ್ಥಿಗಳ ಪಾಲಕರಿಗೆ ಕರೆ ಮಾಡಿ ಧೈರ್ಯ ತುಂಬಲಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಕಾಲೇಜಿನ ವಿಶೇಷ ಅಧಿಕಾರಿ ರಾಜಣ್ಣ ತಿಳಿಸಿದ್ದಾರೆ.

× Chat with us