Mysore
23
broken clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ; ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು

ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆಯೊಂದು ನಡೆದಿದ್ದು ಬಿಹಾರ ಮೂಲದ ರಾಕೇಶ್ (22) ಬಾಯ್ಲರ್‌ ಬೆಲ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್ ನಿನ್ನೆ ನೈಟ್ ಶಿಫ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ಇಂದು ಬೆಳಿಗ್ಗೆ 7:30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು ಬೂದಿ ತೆಗೆಯುವ ಮಷಿನ್ ಬೆಲ್ಟ್‌ಗೆ ಸಿಲುಕಿ ರಾಕೇಶ್‌ ಅಸು ನೀಗಿದ್ದಾರೆ. ಅವಘಡ ಸಂಭವಿಸಿದ ತಕ್ಷಣವೇ ಸಹ ಸಿಬ್ಬಂದಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ರಾಕೇಶ್‌ ಅವರನ್ನು ದಾಖಲಿಸಿದ್ದರಾದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ರಾಕೇಶ್ ಸಾವನ್ನಪ್ಪಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!