ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆಯೊಂದು ನಡೆದಿದ್ದು ಬಿಹಾರ ಮೂಲದ ರಾಕೇಶ್ (22) ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್ ನಿನ್ನೆ ನೈಟ್ ಶಿಫ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.
ಇಂದು ಬೆಳಿಗ್ಗೆ 7:30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು ಬೂದಿ ತೆಗೆಯುವ ಮಷಿನ್ ಬೆಲ್ಟ್‌ಗೆ ಸಿಲುಕಿ ರಾಕೇಶ್ ಅಸು ನೀಗಿದ್ದಾರೆ. ಅವಘಡ ಸಂಭವಿಸಿದ ತಕ್ಷಣವೇ ಸಹ ಸಿಬ್ಬಂದಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ರಾಕೇಶ್ ಅವರನ್ನು ದಾಖಲಿಸಿದ್ದರಾದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ರಾಕೇಶ್ ಸಾವನ್ನಪ್ಪಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…