ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳಾ ಸಬ್​ ಇನ್​ಸ್ಪೆಕ್ಟರ್​‌ ಮೃತದೇಹ ಪತ್ತೆ!

ಉತ್ತರ ಪ್ರದೇಶ: ರಾಜ್ಯದ ಬುಲಂದ್‌ ಶಹರ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಆರ್ಜೂ ಪವಾರ್(30) ಮೃತದೇಹ ಪತ್ತೆಯಾಗಿದೆ.
ಆರ್ಜೂ ಅವರು ಅನೂಪ್ ನಗರದ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಬ್ ಇನ್‌ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 2015ರಲ್ಲಿ ಪೊಲೀಸ್ ಇಲಾಖೆಗೆ ಇವರು ಸೇರಿದ್ದರು.
ಶಾಮಿಲಿ ಜಿಲ್ಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮನೆಯಲ್ಲೇ ಫ್ಯಾನ್‌ಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದು ಕೊಲೆ ಇರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.
× Chat with us