ಹೊಸದಿಲ್ಲಿ: ಕೊಲೆ ಯತ್ನ ಪ್ರಕರಣವೊಂದರಲ್ಲಿ ಸಿಲುಕಿ ವಿಚಾರಣಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಮರುದಿನವೇ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದ ಲಕ್ಷದ್ವೀಪದ ಎನ್ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸುವ ಮೂಲಕ ಈ ಮಾಹಿತಿ ನೀಡಿದೆ.
ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಫೈಜಲ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಮೇಲ್ಮನವಿಯನ್ನು ವಿಚಾರಣೆಗೆ ಸ್ವೀಕರಿಸಿತ್ತು. ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಲಕ್ಷದ್ವೀಪ ಆಡಳಿತ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಕಳೆದ ಫೆಬ್ರವರಿಯಲ್ಲಿ ತಿರಸ್ಕರಿಸಿತ್ತು. ಆದರೆ ಲೋಕಸಭೆ ಸಚಿವಾಲಯ ಫೈಜಲ್ ಅವರ ಅನರ್ಹತೆ ಆದೇಶವನ್ನು ಹಿಂಪಡೆದಿರಲಿಲ್ಲ. ತನ್ನ ವಿರುದ್ಧ ಶಿಕ್ಷೆ ರದ್ದಾಗಿದ್ದರೂ ತಮ್ಮ ಸಂಸತ್ ಸದಸ್ಯತ್ವವನ್ನು ಪುನರ್ಸ್ಥಾಪಿಸಿಲ್ಲ ಎಂದು ದೂರಿ ಫೈಜಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಅವರಿದ್ದ ಪೀಠದೆದುರು ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಅವರು ಕೋರಿದ್ದರು. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಮಾರ್ಚ್ 28 ಕ್ಕೆ ಮುಂದೂಡಿತ್ತು. ಈಗ ಸುಪ್ರೀಂ ತೀರ್ಪಿಗೆ ಮೊದಲೇ ಲೋಕಸಭೆ ಸಚಿವಾಲಯ ಫೈಜಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿದೆ.
ಜನವರಿ 5, 2016 ರಂದು ಆಂಡ್ರೋತ್ ದ್ವೀಪ ಪೊಲೀಸ್ ಠಾಣೆಯಲ್ಲಿ ಫೈಜಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. 2019 ರಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಅವರು ಲೋಕಸಭೆಗೆ ಚುನಾಯಿತರಾದರು. ಜನವರಿ 11, 2023 ರಂದು, ಫೈಜಲ್ ಮತ್ತು ಇತರ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾಗಿದ್ದು 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ, ಅವರನ್ನೂ ಕೂಡ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಕಾಂಗ್ರೆಸ್ ರಾಹುಲ್ ಅನರ್ಹತೆಯನ್ನು ರದ್ದುಪಡಿಸುವಂತೆ ಮನವಿ ಮಾಡಲು ನಿರ್ಧರಿಸಿದೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…