BREAKING NEWS

ಲಕ್ಷದ್ವೀಪ ಸಂಸದ ಫೈಜಲ್ ಅನರ್ಹತೆ ಆದೇಶ ರದ್ದು ಹಿನ್ನೆಲೆ: ರಾಹುಲ್‌ ಸದಸ್ಯತ್ವ ಮರು ಸ್ಥಾಪನೆ ಕೋರಿ ಸದ್ಯವೇ ಕಾಂಗ್ರಸ್‌ ಅರ್ಜಿ.?

ಹೊಸದಿಲ್ಲಿ: ಕೊಲೆ ಯತ್ನ ಪ್ರಕರಣವೊಂದರಲ್ಲಿ ಸಿಲುಕಿ ವಿಚಾರಣಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಮರುದಿನವೇ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದ ಲಕ್ಷದ್ವೀಪದ ಎನ್ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಸಂಸತ್‌ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸುವ ಮೂಲಕ ಈ ಮಾಹಿತಿ ನೀಡಿದೆ.

ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಫೈಜಲ್‌ ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಮೇಲ್ಮನವಿಯನ್ನು ವಿಚಾರಣೆಗೆ ಸ್ವೀಕರಿಸಿತ್ತು. ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಲಕ್ಷದ್ವೀಪ ಆಡಳಿತ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಕಳೆದ ಫೆಬ್ರವರಿಯಲ್ಲಿ ತಿರಸ್ಕರಿಸಿತ್ತು. ಆದರೆ ಲೋಕಸಭೆ ಸಚಿವಾಲಯ ಫೈಜಲ್‌ ಅವರ ಅನರ್ಹತೆ ಆದೇಶವನ್ನು ಹಿಂಪಡೆದಿರಲಿಲ್ಲ. ತನ್ನ ವಿರುದ್ಧ ಶಿಕ್ಷೆ ರದ್ದಾಗಿದ್ದರೂ ತಮ್ಮ ಸಂಸತ್ ಸದಸ್ಯತ್ವವನ್ನು ಪುನರ್ಸ್ಥಾಪಿಸಿಲ್ಲ ಎಂದು ದೂರಿ ಫೈಜಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಅವರಿದ್ದ ಪೀಠದೆದುರು ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಅವರು ಕೋರಿದ್ದರು. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಮಾರ್ಚ್ 28 ಕ್ಕೆ ಮುಂದೂಡಿತ್ತು. ಈಗ ಸುಪ್ರೀಂ ತೀರ್ಪಿಗೆ ಮೊದಲೇ ಲೋಕಸಭೆ ಸಚಿವಾಲಯ ಫೈಜಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿದೆ.

ಜನವರಿ 5, 2016 ರಂದು ಆಂಡ್ರೋತ್ ದ್ವೀಪ ಪೊಲೀಸ್ ಠಾಣೆಯಲ್ಲಿ ಫೈಜಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. 2019 ರಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಅವರು ಲೋಕಸಭೆಗೆ ಚುನಾಯಿತರಾದರು. ಜನವರಿ 11, 2023 ರಂದು, ಫೈಜಲ್ ಮತ್ತು ಇತರ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾಗಿದ್ದು 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ, ಅವರನ್ನೂ ಕೂಡ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಕಾಂಗ್ರೆಸ್ ರಾಹುಲ್ ಅನರ್ಹತೆಯನ್ನು ರದ್ದುಪಡಿಸುವಂತೆ ಮನವಿ ಮಾಡಲು ನಿರ್ಧರಿಸಿದೆ.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

15 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

15 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

17 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

18 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

18 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

22 hours ago