ಕೋಲಾರ : ಭೂ ಕಬಳಿಕೆ ವಿಷಯಕ್ಕೆ ಸಂಬಂಧಪಟ್ಟಂತೆ ಕೋಲಾರದ ಸಂಸದ ಮುನಿಸ್ವಾಮಿ ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನಡುವೆ ಅವಾಚ್ಯ ಶಬ್ಧಗಳ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ಹೋದ ಘಟನೆ ನಡೆದಿದೆ.
ರಾಜ್ಯಸರ್ಕಾರದ ಸೂಚನೆಯ ಮೇರೆಗೆ ಸೋಮವಾರ ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಜನತಾದರ್ಶನ ನಡೆಸುತ್ತಿದ್ದರು. ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕುಳಿತಿದ್ದರು. ಜನತಾದರ್ಶನದ ವೇಳೆ ತಡವಾಗಿ ಆಗಮಿಸಿದ ಸಂಸದ ಮುನಿಸ್ವಾಮಿ ಅವರು ಭೂಗಳ್ಳರನ್ನು ಪಕ್ಕದಲ್ಲೇ ಕೂರಿಸಿಕೊಂಡು ಯಾವ ರೀತಿ ನ್ಯಾಯ ಕೊಡಲು ಸಾಧ್ಯ ಎಂದು ಪ್ರಶ್ನಿಸಿದರು.
ಇದರಿಂದ ಸಿಟ್ಟಿಗೆದ್ದ ಎಸ್.ಎನ್.ನಾರಾಯಣಸ್ವಾಮಿ ಸಂಸದರ ವಿರುದ್ಧ ವಾಗ್ಧಾಳಿ ನಡೆಸಿದರು. ಶಾಸಕರಿಗೆ ಗೌರವ ಕೊಟ್ಟು ಮಾತನಾಡುವುದನ್ನು ಕಲಿ, ಏನೆಂದುಕೊಂಡಿದ್ದೀಯ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಇದರಿಂದ ರೊಚ್ಚಿಗೆದ್ದ ಮುನಿಸ್ವಾಮಿ ಶಾಸಕರ ಮೇಲೇರಿ ಹೋಗಿದ್ದಲ್ಲದೆ, ಹಲ್ಲೆ ನಡೆಸುವ ರೀತಿ ವರ್ತಿಸಿದರು.
ತಕ್ಷಣವೇ ಮಧ್ಯಪ್ರವೇಶ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಸಂಸದ ಮುನಿಸ್ವಾಮಿಯವರನ್ನು ಹೊರಗೆ ಕರೆದುಕೊಂಡು ಹೋದರು. ಬಳಿಕ ಸಮಾಧಾನಪಡಿಸಲಾಯಿತು.
ನಂತರ ಮುಂದುವರೆದ ಜನತಾದರ್ಶನದಲ್ಲಿ ಸಚಿವರ ಮತ್ತೊಂದು ಪಕ್ಕದಲ್ಲಿ ಸಂಸದರು ಆಸೀನರಾದರು. ಇದಕ್ಕೂ ಮೊದಲು ಮಾತನಾಡಿದ ಸಂಸದರು, ನಾನು ನಾರಾಯಣಸ್ವಾಮಿ ಹೆಸರನ್ನು ಪ್ರಸ್ತಾಪಿಸಿ ಆರೋಪ ಮಾಡಲಿಲ್ಲ. ಭೂಗಳ್ಳರಿಂದ ಅನ್ಯಾಯವಾಗುತ್ತಿದೆ. ಒತ್ತುವರಿ ತೆರವು ಮಾಡಿ ಎಂದಷ್ಟೇ ಹೇಳಿದೆ. ನಾರಾಯಣಸ್ವಾಮಿ ತಮಗೆ ಹೇಳಿದ್ದು ಎಂದು ಭಾವಿಸಿ ಜಗಳಕ್ಕೆ ಬಂದಿದ್ದಾರೆ. ಬಂಗಾರಪೇಟೆ ಸೇರಿದಂತೆ ಹಲವಾರು ಕಡೆ ಬಡವರ ಭೂಮಿ ಒತ್ತುವರಿಯಾಗಿದೆ. ಅವರಿಗೆ ನ್ಯಾಯ ಕೊಡಿಸಬೇಕೆಂದು ತಾವು ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು.
ಸಂಸದರು ಮತ್ತು ಶಾಸಕರ ನಡುವೆ ಏಕವಚನ, ಅವಾಚ್ಯ ಶಬ್ಧಗಳ ಬಳಕೆ, ಗೂಂಡಾ ಮಾದರಿಯ ಹಲ್ಲೆ ಪ್ರಯತ್ನಜನತಾದರ್ಶನಕ್ಕೆ ಆಗಮಿಸಿದ್ದ ಸಾರ್ವಜನಿಕರನ್ನು ದಿಗ್ಭ್ರಾಂತರನ್ನಾಗುವಂತೆ ಮಾಡಿತು.
ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ,…
ಮೈಸೂರು: ನಾಲ್ಕು ದಶಕಕ್ಕೂ ಹೆಚ್ಚು ಕಾಲ ಜನರನ್ನು ರಂಜಿಸಿದ್ದ ನಗರದ ಸರಸ್ವತಿ ಚಿತ್ರಮಂದಿರ ನೆನಪಿನಂಗಳಕ್ಕೆ ಸರಿಯುತ್ತಿದೆ. ಪ್ರೇಕ್ಷಕರ ಕೊರತೆಯಿಂದ ಕೋವಿಡ್…
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಅನೇಕ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.…
ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು…
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕೇಂದ್ರ…
ಮುಂಬೈ: ಇನ್ನು 10 ದಿನದೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಹತ್ಯೆ ಮಾಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ…