ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್‌ಡಿಆರ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಕಾರ್ಯಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮೂರನೇ ದಿನಕ್ಕೆ ಮುಂದುವರಿದಿದ್ದು, ಒಟ್ಟು 22 ಜನ ಸಾವನ್ನಪ್ಪಿದ್ದಾರೆ. 86 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ನೆನ್ನೆ ರಕ್ಷಣಾ ಕಾರ್ಯಚರಣೆ ಸ್ಥಗಿತಗೊಂಡಿತು. ನಾಲ್ಕು ಎನ್‌ಡಿಆರ್‌ಎಫ್ ತಂಡಗಳು ಮತ್ತು ಇತರ ಏಜೆನ್ಸಿಗಳು, ಸ್ಥಳೀಯರು ಇಂದು ಬೆಳಿಗ್ಗೆ ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈ ಪ್ರದೇಶದಲ್ಲಿ ಒಟ್ಟು 48 ಕುಟುಂಬಗಳು ವಾಸವಾಗಿದ್ದು, 17 ಮನೆಗಳು ಭೂಕುಸಿತದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದೆ. ರಾಯಗಢ ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿಯ ಪ್ರಕಾರ, 48 ಕುಟುಂಬಗಳ 229 ಜನರಲ್ಲಿ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ 111 ಮಂದಿ ಸುರಕ್ಷಿತವಾಗಿದ್ದಾರೆ, 86 ಜನರನ್ನು ಇನ್ನೂ ಪತ್ತೆ ನಡೆಸಲಾಗುತ್ತಿದೆ ಎಂದು ಹೇಳಿದೆ.
ಗಾಯಗೊಂಡಿರುವವರನ್ನು ನಿರಾಶ್ರಿತರ ಶಿಬಿರಗಳಲ್ಲಿ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಚರಣೆ ಬಗ್ಗೆ ರಾಜ್ಯ ಸರ್ಕಾರ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯುತ್ತಿದೆ. ಭೂಕುಸಿತ ಘಟನೆಯ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಭೂಕುಸಿತ ಪೀಡಿತ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಶುಕ್ರವಾರ ರಾಜ್ಯ ವಿಧಾನಸಭೆಗೆ ತಿಳಿಸಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…