BREAKING NEWS

ಭಾರತ, ಚೀನಾ ಸೇರಿ 7 ದೇಶಗಳಿಗೆ ಉಚಿತ ಪ್ರವಾಸಿ ವೀಸಾ ನೀಡಿದ ಲಂಕಾ ಕ್ಯಾಬಿನೆಟ್

ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ.

ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಶ್ರೀಲಂಕಾ ಈ ನಿರ್ಧಾರ ತೆಗೆದುಕೊಂಡಿದೆ.

ಉಚಿತ ಪ್ರವಾಸಿ ವೀಸಾ ನೀತಿಯನ್ನು ಪ್ರಾಯೋಗಿಕವಾಗಿ ಮಾರ್ಚ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ವಿದೇಶಾಂಗ ಸಚಿವ ಸಬ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥೈಲ್ಯಾಂಡ್‌ ಪ್ರವಾಸಿಗರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಉಚಿತ ಪ್ರವೇಶಕ್ಕೆ ಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಈ ಏಳು ದೇಶಗಳ ಪ್ರವಾಸಿಗರು ಶ್ರೀಲಂಕಾಕ್ಕೆ ಭೇಟಿ ನೀಡಿದಾಗ ಯಾವುದೇ ಶುಲ್ಕವಿಲ್ಲದೆ ವೀಸಾಗಳನ್ನು ಪಡೆಯಬಹುದು.

ಭಾರತವು ಸಾಂಪ್ರದಾಯಿಕವಾಗಿ ಶ್ರೀಲಂಕಾದ ಪ್ರಮುಖ ಪ್ರವಾಸೋದ್ಯಮ ಮಾರುಕಟ್ಟೆಯಾಗಿದೆ. ಕಳೆದ ಸೆಪ್ಟೆಂಬರ್ ನಲ್ಲಿ 30,000ಕ್ಕೂ ಹೆಚ್ಚು ಭಾರತೀಯರು ಶ್ರೀಲಂಕಾಗೆ ಭೇಟಿ ನೀಡಿದ್ದು, ಅಗ್ರಸ್ಥಾನದಲ್ಲಿದೆ. 8 ಸಾವಿರ ಚೀನೀ ಪ್ರವಾಸಿಗರ ಭೇಟಿಯೊಂದಿಗೆ ಚೀನಾ ಎರಡನೇ ಸ್ಥಾನದಲ್ಲಿದೆ.

andolanait

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

15 mins ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

2 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

2 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

3 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

4 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

5 hours ago