BREAKING NEWS

ವಕೀಲರು ಮುಷ್ಕರ ನಡೆಸುವಂತಿಲ್ಲ ಅಥವಾ ನ್ಯಾಯಾಂಗ ಕಾರ್ಯಗಳಿಂದ ದೂರವಿರುವಂತಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ : ವಕೀಲರು ಮುಷ್ಕರ ನಡೆಸುವಂತಿಲ್ಲ ಹಾಗೂ ನ್ಯಾಯಾಂಗದ ಕಾರ್ಯಗಳಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಅಡ್ವೊಕೇಟ್ ಗಳು ಮನವಿ ಮಾಡಬಹುದಾಗಿರುವ ರೀತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕುಂದುಕೊರತೆ ಪರಿಹಾರ ಸಮಿತಿಯನ್ನು ರಚಿಸುವಂತೆ ಎಲ್ಲಾ ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ನ್ಯಾ. ಎಂಆರ್ ಶಾ ಹಾಗೂ ಅಸಾದುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ, ಜಿಲ್ಲಾ ಕೋರ್ಟ್ ಮಟ್ಟದಲ್ಲಿ ಕುಂದುಕೊರತೆ ಪರಿಹಾರ ಸಮಿತಿ ರಚನೆಯಾಗಬೇಕೆಂದು ಹೇಳಿದ್ದು, ಈ ಮೂಲಕ ಫೈಲಿಂಗ್ ಅಥವಾ ಪ್ರಕರಣಗಳ ಪಟ್ಟಿ ಅಥವಾ ಕೆಳ ನ್ಯಾಯಾಂಗದ ಸದಸ್ಯರ ದುರ್ವರ್ತನೆ, ಕಾರ್ಯವಿಧಾನದ ಬದಲಾವಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಬೇಕೆಂದು ಹೇಳಿದ್ದಾರೆ.

ನಾವು ಮತ್ತೊಮ್ಮೆ ಹೇಳುತ್ತಿದ್ದೆವೆ ಬಾರ್ ಕೌನ್ಸಿಲ್ ನ ಯಾವುದೇ ಸದಸ್ಯ ಮುಷ್ಕರ ನಡೆಸುವಂತಿಲ್ಲ. ವಕೀಲರು ಮುಷ್ಕರ ನಡೆಸುವುದು ಅಥವಾ ಅವರ ಕೆಲಸದಿಂದ ದೂರವಿರುವುದು ನ್ಯಾಯಾಂಗ ಕೆಲಸಕ್ಕೆ ಅಡ್ಡಿಯಾಗುತ್ತದೆ ಎಂದು ಈ ನ್ಯಾಯಾಲಯವು ಪದೇ ಪದೇ ಒತ್ತಿಹೇಳಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ತಮ್ಮ ದೂರುಗಳ ಪರಿಹಾರಕ್ಕೆ ಸೂಕ್ತ ವೇದಿಕೆಯನ್ನು ಕೋರಿ ಡೆಹ್ರಾಡೂನ್‌ನ ಜಿಲ್ಲಾ ವಕೀಲರ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಈ ಆದೇಶದ ಮೂಲಕ ವಿಲೇವಾರಿ ಮಾಡಿದೆ ಮತ್ತು ಈ ಆದೇಶದ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್‌ಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago