BREAKING NEWS

ಬೇರೆ ಪಕ್ಷದ ನಾಯಕರು, ಕಾರ್ಯಕರ್ತರು ಇಚ್ಚೆಪಟ್ಟು ಬಂದರೆ ತಡೆಯಲು ಸಾಧ್ಯವಿಲ್ಲ: ಡಿ.ಕೆ‌.ಶಿವಕುಮಾರ್

ಚಾಮರಾಜನಗರ : ನಮಗೆ ಆಪರೇಷನ್ ಹಸ್ತ ಅವಶ್ಯಕತೆಯಿಲ್ಲ. ಬೇರೆ ಪಕ್ಷದ ನಾಯಕರು, ಕಾರ್ಯಕರ್ತರು ಅವರಾಗಿಯೇ ಇಚ್ಚೆಪಟ್ಟು ಬಂದರೆ ತಡೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಹೊರವಲಯದ ಬದನಗುಪ್ಪೆ ಕೈಗಾರಿಕೆ ಪ್ರದೇಶದಲ್ಲಿ ಟೆಕ್ರಾನ್ ಬ್ಯಾಟರೀಶ್ ಕಾರ್ಖಾನೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ವೇಳೆ ರೇಣುಕಾಚಾರ್ಯ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ,’ನಾನೊಬ್ಬ ಉಪಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷ. ಹಾಗಾಗಿ ಅವರ ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚಿಸಲು ಬಂದಿದ್ದರು’ ಎಂದರು.

ಅಶೋಕ್ ಗೆ ಮಾಹಿತಿಯಿಲ್ಲ : ಮೋದಿ ಭೇಟಿ ವೇಳೆ ಸಿಎಂ- ಡಿಸಿಎಂ ಆಗಮಿಸದ ಬಗ್ಗೆ ಅಶೋಕ್ ಟೀಕೆಗೆ ಪ್ರತಿಕ್ರಿಯೆ ನೀಡಿ, ಮೋದಿ ಭೇಟಿ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಕಾರ್ಯಾಲಯದಿಂದ ಮಾಹಿತಿಯನ್ನೇ ನೀಡಿಲ್ಲ. ಆರ್ ಅಶೋಕ್‌ಗೆ ಪ್ರಧಾನಿ ಭೇಟಿಯ ಸರಿಯಾದ ಮಾಹಿತಿಯೇ ಇಲ್ಲ! ಪ್ರಧಾನಿ ಕಾರ್ಯಕ್ರಮಕ್ಕೆ ಯಾರನ್ನು ಕರೆದಿದ್ದಾರೆ ಅನ್ನೋ ಮಾಹಿತಿನೆ ಇಲ್ಲಿನ ಬಿಜೆಪಿ ನಾಯಕರಿಗೆ ಇಲ್ಲ ಎಂದು ಟಾಂಗ್ ನೀಡಿದರು.

ಸಿಎಂ, ಡಿಸಿಎಂ, ರಾಜ್ಯಪಾಲರು ಬರುವುದದು ಬೇಡವೆಂದು ಪ್ರಧಾನ ಮಂತ್ರಿ ಹೇಳುತ್ತಾರೆ. ಆದರೆ ಇಲ್ಲಿ ಶಿಷ್ಠಾಚಾರ ಪಾಲನೆ ಮಾಡಿಲ್ಲವೆಂದು ಅಶೋಕ್ ಹೇಳುತ್ತಿದ್ದಾರೆ. ಏನೋ ಪ್ರಚಾರಕ್ಕೆ ಮಾತಾಡಬೇಕು ಅಂತ ಮಾಧ್ಯಮದವರ ಮುಂದೆ ಸುಖಾಸುಮ್ಮನೆ ಮಾತನಾಡಿದ್ದಾರೆ ಅಷ್ಟೇ. ನಾವು ಕಾಂಗ್ರೆಸ್ ನವರು ಎಲ್ಲಾ ರೀತಿಯ ಪ್ರೋಟೊಕಾಲ್ ಪಾಲಿಸುತ್ತೇವೆ ಎಂದರು.

ಆಕ್ಸಿಜನ್ ಸಂತ್ರಸ್ತರಿಗೆ ಉದ್ಯೋಗ : ಆಕ್ಸಿಜನ್ ದುರಂತದ ಸಂತ್ರಸ್ತರಿಗೆ ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲೇ ಉದ್ಯೋಗ ನೀಡಲಾಗುವುದು. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೊಂದಿಗು ಸಭೆ ಮಾಡಲಾಗಿದೆ. ಆಕ್ಸಿಜನ್ ದುರಂತದ ಬಗ್ಗೆ ಪರಿಶೀಲಿಸಲು ಸೂಚಿಸಲಾಗಿದೆ. ಸಂತ್ರಸ್ತರಿಗೆ ಸಹಾಯ ಹಾಗು ನ್ಯಾಯ ಒದಗಿಸುವುದು ಮುಖ್ಯಮಂತ್ರಿ ಗಳು ಹಾಗೂ ನನ್ನ ಆದ್ಯತೆಯಾಗಿದೆ ಎಂದು ಹೇಳಿದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago