BREAKING NEWS

ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ : ಟ್ವೀಟ್‌ನಲ್ಲೇ ಕಾಲೆಳೆದ ಕಾಂಗ್ರೆಸ್‌

ಬೆಂಗಳೂರು : ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಅಂತಹ ವಿಪಕ್ಷನಾಯಕ ಬೇಕಾಗಿದ್ದಾರೆʼʼ ಇದು ಯಾವುದೋ ಜಾಹೀರಾತಿನ ಪ್ರಕಟಣೆಯಲ್ಲ ರಾಜ್ಯ ಕಾಂಗ್ರೆಸ್‌, ಬಿಜೆಪಿಯನ್ನು ಟ್ವೀಟ್‌ ಮೂಲಕ ಟೀಕಿಸಿರುವ ಪರಿ ಇದಾಗಿದೆ.

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಗಿದು 50 ದಿನಗಳೇ ಕಳೆದಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ವಹಿಸಿಕೊಂಡು ಒಂದು ತಿಂಗಳು ಕಳೆದಿದೆ. ಇಷ್ಟಾದರೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡುವಲ್ಲಿ ಎಡವಿದೆ. ಈ ವಿಚಾರದ ಬಗ್ಗೆ ಕಾಂಗ್ರೆಸ್‌ ಟ್ವೀಟ್‌ ಮೂಲಕ ಟೀಕಿಸಿದೆ.

ಟ್ವೀಟ್‌ನಲ್ಲಿ ಏನಿದೆ?

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ…
* ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
* ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
* ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!

ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ರಾಜ್ಯ ಬಿಜೆಪಿ ಆಡಳಿತ ಮಾಡಲು ನಾಲಾಯಕ್ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ. ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನ ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದೆ.

lokesh

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago