ಬೆಂಗಳೂರು: ಸಮಾಜದ ಸ್ವಾಥ್ಯ್ತ ಹಾಳು ಮಾಡುವ, ನೈತಿಕ ಪೊಲೀಸ್ ಗಿರಿ ಹಾಗೂ ಕೋಮವಾದವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡುವ ಯಾವುದೇ ವ್ಯಕ್ತಿ, ಸಂಘಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮವಹಿಸಲಾಗುವುದು.ಶಾಂತಿ, ಸುವ್ಯವಸ್ಥೆಗೆ ಭಂಗ ತರುವವರು, ಬಜರಂಗದಳವು ಸೇರಿ ಕಾನೂನು ಕ್ರಮವಹಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಎಚ್ಚರಿಕೆ ಕೊಟ್ಟಿದ್ದಾರೆ.
ವಿಧಾನಸೌಧದಲ್ಲಿ ಕಚೇರಿ ಕೊಠಡಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜತೆಗೆ ಪರಿಶುದ್ಧ ಆಡಳಿತ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಅದೇ ಕಿವಿಮಾತು ಹೇಳಿದ್ದಾರೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಗುಡುಗಿದರು.
ಪಕ್ಷದ ಚುನಾವಣಾ ಪ್ರಣಾಳಿಕೆ ಸ್ಪಷ್ಟವಾಗಿದೆ. ಶಾಂತಿ, ಸುವ್ಯವಸ್ಥೆಗೆ ಭಂಗ ತರುವವರು, ಬಜರಂಗದಳವು ಸೇರಿ ಕಾನೂನು ಕ್ರಮವಹಿಸಲಾಗುತ್ತದೆ ಅಂತಹ ಸಂಘಟನೆಗಳನ್ನು ನಿಷೇಧಿಸುವ ವಿಷಯವೂ ಪ್ರಸ್ತಾಪಿಸಿದ್ದು, ರಾಜ್ಯದಲ್ಲಿ ಅಂತಹ ಪ್ರಮೇಯ ಬರಲಾರದು ಎಂಬ ವಿಶ್ವಾಸವಿದೆ. ಬರಬಾರದು ಎಂದು ಆಶಿಸುವುದಾಗಿ ಹೇಳಿದರು.
ಬಜರಂಗದಳ ನಿಷೇಧದ ಬಗ್ಗೆ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಯಾರು ಶಾಂತಿ ಕದಡುತ್ತಾರೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಅವರು ಯಾರೂ ಅದನ್ನು ಮಾಡಲ್ಲ ಎಂದರೆ ಭಯ ಪಡುವ ಅಗತ್ಯವಿಲ್ಲ. ಮಾಡುತ್ತೇವೆ ಎಂದರೆ ಅವರಿಗೆ ಭಯ ಆಗುತ್ತದೆ. ಕಾನೂನು ಮುರಿಯಲ್ಲ ಎಂದರೆ ಭಯ ಯಾಕೆ? ಅದು ಅವರಿಗೆ ಅರ್ಥ ಆದರೆ ಸಾಕು ಎಂದು ಸ್ಪಷ್ಟನೆ ನೀಡಿದರು.
ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್ ಇರುತ್ತೆ, ಒದೆನೂ ಇರುತ್ತೆ, ಮುಂದುವರೆದು ಗುಂಡು ಹಾರಿಸೋದು ಇರುತ್ತೆ. ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ. ಲಾಠಿ ಏಟು ತಿನ್ನಬೇಕೋ ಅಥವಾ ಗುಂಡು ಹಾರಿಸಿಕೊಳ್ಳಬೇಕೋ ಅಥವಾ ಶಾಂತಿಯಿಂದ ರಾಜ್ಯ ನಡೆಸಬೇಕೋ ಎಂದು ಜನರೇ ತೀರ್ಮಾನ ಮಾಡಲಿ ಎಂದರು.
ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ. ಅನೇಕ ಜನ ಟೀಕೆ ಟಿಪ್ಪಣಿ ಮಾಡಬಹುದು. ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಳ್ಳುತ್ತೇವೆ. ದೇವರನ್ನು ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ. ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತದ್ದು. ರಾಜ್ಯದ ಕಾನೂನು ವ್ಯವಸ್ಥೆಯನ್ನು ಕಾಪಾಡಬೇಕು. ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಾಮುಖ್ಯ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಜನತೆಗೆ ಮುಟ್ಟುತ್ತದೆ. ಇಲ್ಲಿಂದ ಒಳ್ಳೆಯ ಕೆಲಸಗಳಾಗಲಿ. ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ವಿವರ ನೀಡುತ್ತೇವೆ. ಈಗ ಏನೇ ಹೇಳಿದರೂ ಅಪ್ರಸ್ತುತವಾಗುತ್ತದೆ ಎಂದು ಹೇಳಿದರು.
ಪಿಎಸ್‍ಐ ನೇಮಕ ಅಕ್ರಮ ಪ್ರಕರಣವು ಹೈಕೋರ್ಟ್‍ನಲ್ಲಿ ವಿಚಾರಣೆಯಲ್ಲಿದ್ದು, ಅಗತ್ಯ ಕಾನೂನು ಕ್ರಮಗಳ ಕುರಿತು ಅಡ್ವೋಕೇಟ್ ಜನರಲ್ ಜತೆಗೆ ಚರ್ಚಿಸಲಾಗುವುದು. ಜತೆಗೆ ತಪ್ಪಿತಸ್ಥರ ವಿರುದ್ಧ ತಕ್ಕ ಕಾನೂನು ಕ್ರಮವಾಗುವಂತೆ ನೋಡಿಕೊಳ್ಳಲು ಸರ್ಕಾರ ಬದ್ಧವೆಂದು ಪರಮೇಶ್ವರ್ ಭರವಸೆ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…