BREAKING NEWS

ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡುವ ಯಾವುದೇ ವ್ಯಕ್ತಿ, ಸಂಘಸಂಸ್ಥೆಗಳ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಬೆಂಗಳೂರು: ಸಮಾಜದ ಸ್ವಾಥ್ಯ್ತ ಹಾಳು ಮಾಡುವ, ನೈತಿಕ ಪೊಲೀಸ್ ಗಿರಿ ಹಾಗೂ ಕೋಮವಾದವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡುವ ಯಾವುದೇ ವ್ಯಕ್ತಿ, ಸಂಘಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮವಹಿಸಲಾಗುವುದು.ಶಾಂತಿ, ಸುವ್ಯವಸ್ಥೆಗೆ ಭಂಗ ತರುವವರು, ಬಜರಂಗದಳವು ಸೇರಿ ಕಾನೂನು ಕ್ರಮವಹಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಎಚ್ಚರಿಕೆ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಕಚೇರಿ ಕೊಠಡಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜತೆಗೆ ಪರಿಶುದ್ಧ ಆಡಳಿತ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಅದೇ ಕಿವಿಮಾತು ಹೇಳಿದ್ದಾರೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಗುಡುಗಿದರು.

ಪಕ್ಷದ ಚುನಾವಣಾ ಪ್ರಣಾಳಿಕೆ ಸ್ಪಷ್ಟವಾಗಿದೆ. ಶಾಂತಿ, ಸುವ್ಯವಸ್ಥೆಗೆ ಭಂಗ ತರುವವರು, ಬಜರಂಗದಳವು ಸೇರಿ ಕಾನೂನು ಕ್ರಮವಹಿಸಲಾಗುತ್ತದೆ ಅಂತಹ ಸಂಘಟನೆಗಳನ್ನು ನಿಷೇಧಿಸುವ ವಿಷಯವೂ ಪ್ರಸ್ತಾಪಿಸಿದ್ದು, ರಾಜ್ಯದಲ್ಲಿ ಅಂತಹ ಪ್ರಮೇಯ ಬರಲಾರದು ಎಂಬ ವಿಶ್ವಾಸವಿದೆ. ಬರಬಾರದು ಎಂದು ಆಶಿಸುವುದಾಗಿ ಹೇಳಿದರು.

ಬಜರಂಗದಳ ನಿಷೇಧದ ಬಗ್ಗೆ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಯಾರು ಶಾಂತಿ ಕದಡುತ್ತಾರೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಅವರು ಯಾರೂ ಅದನ್ನು ಮಾಡಲ್ಲ ಎಂದರೆ ಭಯ ಪಡುವ ಅಗತ್ಯವಿಲ್ಲ. ಮಾಡುತ್ತೇವೆ ಎಂದರೆ ಅವರಿಗೆ ಭಯ ಆಗುತ್ತದೆ. ಕಾನೂನು ಮುರಿಯಲ್ಲ ಎಂದರೆ ಭಯ ಯಾಕೆ? ಅದು ಅವರಿಗೆ ಅರ್ಥ ಆದರೆ ಸಾಕು ಎಂದು ಸ್ಪಷ್ಟನೆ ನೀಡಿದರು.

ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್ ಇರುತ್ತೆ, ಒದೆನೂ ಇರುತ್ತೆ, ಮುಂದುವರೆದು ಗುಂಡು ಹಾರಿಸೋದು ಇರುತ್ತೆ. ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ. ಲಾಠಿ ಏಟು ತಿನ್ನಬೇಕೋ ಅಥವಾ ಗುಂಡು ಹಾರಿಸಿಕೊಳ್ಳಬೇಕೋ ಅಥವಾ ಶಾಂತಿಯಿಂದ ರಾಜ್ಯ ನಡೆಸಬೇಕೋ ಎಂದು ಜನರೇ ತೀರ್ಮಾನ ಮಾಡಲಿ ಎಂದರು.

ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ. ಅನೇಕ ಜನ ಟೀಕೆ ಟಿಪ್ಪಣಿ ಮಾಡಬಹುದು. ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಳ್ಳುತ್ತೇವೆ. ದೇವರನ್ನು ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ. ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತದ್ದು. ರಾಜ್ಯದ ಕಾನೂನು ವ್ಯವಸ್ಥೆಯನ್ನು ಕಾಪಾಡಬೇಕು. ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಾಮುಖ್ಯ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಜನತೆಗೆ ಮುಟ್ಟುತ್ತದೆ. ಇಲ್ಲಿಂದ ಒಳ್ಳೆಯ ಕೆಲಸಗಳಾಗಲಿ. ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ವಿವರ ನೀಡುತ್ತೇವೆ. ಈಗ ಏನೇ ಹೇಳಿದರೂ ಅಪ್ರಸ್ತುತವಾಗುತ್ತದೆ ಎಂದು ಹೇಳಿದರು.

ಪಿಎಸ್‍ಐ ನೇಮಕ ಅಕ್ರಮ ಪ್ರಕರಣವು ಹೈಕೋರ್ಟ್‍ನಲ್ಲಿ ವಿಚಾರಣೆಯಲ್ಲಿದ್ದು, ಅಗತ್ಯ ಕಾನೂನು ಕ್ರಮಗಳ ಕುರಿತು ಅಡ್ವೋಕೇಟ್ ಜನರಲ್ ಜತೆಗೆ ಚರ್ಚಿಸಲಾಗುವುದು. ಜತೆಗೆ ತಪ್ಪಿತಸ್ಥರ ವಿರುದ್ಧ ತಕ್ಕ ಕಾನೂನು ಕ್ರಮವಾಗುವಂತೆ ನೋಡಿಕೊಳ್ಳಲು ಸರ್ಕಾರ ಬದ್ಧವೆಂದು ಪರಮೇಶ್ವರ್ ಭರವಸೆ ನೀಡಿದರು.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago