BREAKING NEWS

ವಿಧಾನಪರಿಷತ್‍ನ ಉಪಚುನಾವಣೆ: ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್‌ ಅಭ್ಯರ್ಥಿಗಳು

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‍ನ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎಸ್.ಎನ್.ಬೋಸರಾಜ್ ಹಾಗು ತಿಪ್ಪಣ್ಣಪ್ಪ ಕಮಕನೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್‍ನಲ್ಲಿ ಖಾಲಿ ಇದ್ದ 3 ಸದಸ್ಯ ಸ್ಥಾನಗಳಿಗೆ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿತ್ತು. 3 ಸದಸ್ಯ ಸ್ಥಾನದ ಚುನಾವಣೆಗೂ ತಲಾ ಒಬ್ಬರೇ ಅಭ್ಯರ್ಥಿಗಳು ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

2028ರ ಜೂ.14ರವರೆಗೆ ಅವಧಿಯಿರುವ ವಿಧಾನಪರಿಷತ್‍ನ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. 2026ರ ಜೂ.30ರವರೆಗೆ ಅವಧಿಯಿರುವ ಮೇಲ್ಮನೆ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ತಿಪ್ಪಣ್ಣಪ್ಪ ಕಮಕನೂರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಸಚಿವ ಆರ್.ಶಂಕರ್ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು.  2024ರ ಜೂ.17ರವರೆಗಿನ ಅವಧಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಚಿವ ಎನ್.ಎಸ್.ಬೋಸರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಸಚಿವ ಬಾಬುರಾವ್ ಚಿಂಚನಸೂರು ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಜೂ.20ರಂದು ಈ ಮೂವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.

ಅಂತಿಮವಾಗಿ ಚುನಾವಣಾ ಕಣದಲ್ಲಿ 3 ಮಂದಿ ಮಾತ್ರ ಉಳಿದಿದ್ದರು. ನಾಮಪತ್ರ ವಾಪಸ್ ಪಡೆಯಲು ಇಂದು ಕಡೆಯ ದಿನವಾಗಿದ್ದು, ನಿಗದಿತ ಅವಧಿ ಮುಗಿದ ಬಳಿಕ ಮೇಲ್ಮನೆಗೆ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago