BREAKING NEWS

ಜು.21ರವರೆಗೆ ವಿಧಾನಮಂಡಲ ಅಧಿವೇಶನ ವಿಸ್ತರಣೆ: ಯು.ಟಿ.ಖಾದರ್‌

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.

ವಿಧಾನಮಂಡಲ ಅಧಿವೇಶನವನ್ನು ಜುಲೈ 21 ರಂದು ವರೆಗೆ ನಡೆಸಲು ಬಿಎಸಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಹೇಳಿದ್ದಾರೆ.

ಈ ಮುಂಚೆ ಜುಲೈ 3 ರಿಂದ ಜುಲೈ 14 ವರೆಗೆ ವಿಧಾನಮಂಡಲ ಅಧಿವೇಶನ ನಿಗದಿಯಾಗಿತ್ತು. ಇದೀಗ ಅದನ್ನು 21ರ ವರೆಗೆ ವಿಸ್ತರಿಸಲಾಗಿದೆ.

ವಿಧಾನಸಭೆಯ ಕಲಾಪದ ಮಧ್ಯೆ ಸಭಾಧ್ಯಕ್ಷರು ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಿಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ.

ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ ಎಂದು ತಿಳಿಸಿದರು.

ಈ ಮಧ್ಯೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯರು ಧರಣಿ ಮುಂದುವರಿಸಿದ್ದು, ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಗ್ಯಾರಂಟಿ ಜಾರಿ ಬಗ್ಗೆ ಯಾವ ರೀತಿ ಮೋಸ ಆಗಿದೆ ಎಂದು ನಿಲುವಳಿ ಸೂಚನೆ ನೀಡಿದ್ದೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮೊದಲು ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಎಂದು ಹೇಳಿದ್ದರು. ಈ ಬಗ್ಗೆ ಚರ್ಚೆಗೆ ಅವಕಾಶ ನೀಡಿದರೆ ನಾವು ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಚರ್ಚೆಗೆ ಅವಕಾಶ ನೀಡುತ್ತೇನೆ. ದಿನಕ್ಕೆ ಒಂದು ನಿಲುವಳಿ ಮಾತ್ರ ಚರ್ಚೆಗೆ ಎತ್ತಿಕೊಳ್ಳಬಹುದು, ತಾವೆಲ್ಲ ಧರಣಿ ಕೈಬಿಟ್ಟು ಆಸನಕ್ಕೆ ಬನ್ನಿ ಎಂದು ಸ್ಪೀಕರ್ ಯುಟಿ ಖಾದರ್ ಮನವಿ ಮಾಡಿದರು.

ಇದಕ್ಕೆ ಒಪ್ಪದ ಬಿಜೆಪಿ ಸ್ಪೀಕರ್ ಯು.ಟಿ‌.ಖಾದರ್ ಓನ್ ಸೈಡ್ ಸ್ಪೀಕರ್, ಓನ್ ಸೈಡ್ ಸ್ಪೀಕರ್ ಎಂದು ಘೋಷಣೆ ಕೂಗಲು ಆರಂಭಿಸಿದರು. ಬಿಜೆಪಿ ಗದ್ದಲ ಮುಂದುವರಿದ ಹಿನ್ನೆಲೆ ಕಲಾಪವನ್ನು ಸ್ಪೀಕರ್ ಯು.ಟಿ.ಖಾದರ್‌ ಅವರು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿದ್ದಾರೆ

ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆಗೆ ಆಗ್ರಹಿಸಿ ಬಿಜೆಪಿ ಸದಸ್ಯರ ಧರಣಿ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

5 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago