BREAKING NEWS

ಸಿ.ಟಿ.ರವಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿ : ಈಶ್ವರಪ್ಪ

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನಿಡಘಟ್ಟಗ್ರಾಮದಲ್ಲಿ ಮಂಗಳವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮಾತನಾಡಿದ ಕೆ.ಎಸ್‌.ಈಶ್ವರಪ್ಪ ಈ ಚುನಾವಣೆಯಲ್ಲಿ ಸಿ.ಟಿ.ರವಿ ಅವರನ್ನು ನೀವು ಗೆಲ್ಲಿಸಬೇಕು, ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು.

ಸೋಮವಾರ ಮೈಸೂರಿನಲ್ಲಿ ಸಿ.ಟಿ.ರವಿ ಮಾತನಾಡುವ ವೇಳೆಯಲ್ಲಿ ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಎಲ್ಲ ಕಡೆಯಲ್ಲೂ ನಾನು ಸಿಎಂ ಆಗಬೇಕೆಂಬ ಅಪೇಕ್ಷೆ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಡಿಕೆಶಿ, ಸಿದ್ದುಗೆ ಜೈಲು ಖಚಿತ : ಇನ್ನು ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆ.ಎಸ್‌.ಈಶ್ವರಪ್ಪ, ಜಾಮೀನಿನ ಮೇಲಿರುವ ಡಿ.ಕೆ.ಶಿವಕುಮಾರ್‌ ಅರ್ಕಾವತಿ ಬಡಾವಣೆ ಹಗರಣದಲ್ಲಿ ಸಿದ್ದರಾಮಯ್ಯ ಮುಂದೊಂದು ದಿನ ಜೈಲಿಗೆ ಹೋಗುವುದು ಖಚಿತ ಎಂದರು. ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಹಗರಣದಲ್ಲಿ .8000 ಕೋಟಿ ಲೂಟಿ ಹೊಡೆದಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶ ಕೆಂಪಯ್ಯ ವರದಿ ಕೊಟ್ಟಿದ್ದಾರೆ. ಇದನ್ನು ಕಾಂಗ್ರೆಸ್‌ ಮುಚ್ಚಿಟ್ಟಿದೆ. ಡಿ.ಕೆ.ಶಿವಕುಮಾರ್‌ ತಿಹಾರ್‌ ಜೈಲಿನಲ್ಲಿದ್ದು ಬಂದವರು. ಇವರು ಜೈಲಿಗೆ ಹೋಗುವುದು ಯಾವ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

7 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

8 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

8 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

9 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

9 hours ago