BREAKING NEWS

ತಾಯಿ ಚಾಮುಂಡಿದೇವಿ ಅನುಗ್ರಹದಿಂದ ಇನ್ನಾದರೂ ರಾಜ್ಯದಲ್ಲಿ ಮಳೆಯಾಗಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್​ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, ಸಚಿವರಾದ ಕೆ.ಹೆಚ್​.ಮುನಿಯಪ್ಪ, ವೆಂಕಟೇಶ್​, ಶಿವರಾಜ್​ ತಂಗಡಗಿ, ಕೆ.ಎನ್​.ರಾಜಣ್ಣ, ಭೈರತಿ ಸುರೇಶ್​ ಹಾಗೂ ಸಂಸದ ಪ್ರತಾಪ್​ ಸಿಂಹ ಜತೆಯಲ್ಲಿದ್ದರು.

ಜಂಬೂ ಸವಾರಿಯಲ್ಲಿ ನಂದಿಗೆ ಅಗ್ರ ಪೂಜೆ ಸಲ್ಲಿಕೆಯಾಗುತ್ತದೆ. ಅದರಂತೆ ಇಂದು ಮಧ್ಯಾಹ್ನ 1.46ರಿಂದ 2.08ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದರು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ಇರುವ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ಅವರು, ಜಂಬೂ ಸವಾರಿಗೆ ಅಧಿಕೃತ ಚಾಲನೆಯನ್ನು ನೀಡಿದರು.

ಈ ವೇಳೆ ವೀರಗಾಸೆ ತಂಡದವರು ಭಾಗಿಯಾಗಿದ್ದರು. ದಶಕಗಳಿಂದ ಉಡಿಗಾಲ ಮಹದೇವಸ್ವಾಮಿ ನೇತೃತ್ವದ ಈ ತಂಡ ಭಾಗಿಯಾಗುತ್ತಲೇ ಬಂದಿದ್ದು, ದಸರೆಗೆ ಕಳೆಕಟ್ಟಿಕೊಟ್ಟಿದೆ.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವರ್ಷ ಮಳೆಯಿಲ್ಲದೆ ರಾಜ್ಯದ ಜನತೆ ಕಂಗಾಲಾಗಿದ್ದಾರೆ. ಬರಗಾಲ ತಾಂಡವವಾಡುತ್ತಿದೆ. ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಇನ್ನಾದರೂ ತಾಯಿ ಚಾಮುಂಡಿ ದೇವಿಯ ಅನುಗ್ರಹದಿಂದ ಮಳೆಯಾಗಲಿ ಎಂದು ನಾನು ಇಂದು ವಿಜಯದಶಮಿಯ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.

ಮೈಸೂರು ದಸರಾ ವಿಶ್ವವಿಖ್ಯಾತ ಉತ್ಸವ. ದಸರಾ ಎಂದರೆ ನಮಗೆ ನಾಡಹಬ್ಬ. ಜನರ ಹಬ್ಬವಿದು, ಈ ಹಬ್ಬವನ್ನು ಬಹಳ ಅದ್ದೂರಿಯಾಗಿ ಈ ಬಾರಿ ಆಚರಿಸಬೇಕೆಂದು ನಮ್ಮ ಸರ್ಕಾರ ಅಂದುಕೊಂಡಿತ್ತು. ಆದರೆ ರಾಜ್ಯದಲ್ಲಿ ಬರದ ಛಾಯೆಯಿಂದ ಅದ್ದೂರಿಯಾಗಿ ಆಚರಿಸದೆ ಸಂಪ್ರದಾಯಬದ್ಧವಾಗಿ ಆಚರಿಸಿದ್ದೇವೆ ಎಂದರು.

ದಸರಾ ನೋಡಲು ದೇಶ ವಿದೇಶಗಳಿಂದ ಜನರು ಬಂದಿದ್ದಾರೆ. ಈ ವರ್ಷ 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಜನರು ಉತ್ಸಾಹ, ಸಂಭ್ರಮದಿಂದ ಭಾಗವಹಿಸುತ್ತಿದ್ದಾರೆ. ವಿಜಯನಗರ ಅರಸರು ಆಚರಿಸುತ್ತಿದ್ದ ಈ ದಸರಾ ಉತ್ಸವವನ್ನು ಅವರು ಗತಿಸಿದ ನಂತರ ಮೈಸೂರು ಅರಸರು ಶ್ರೀರಂಗಪಟ್ಟಣದಲ್ಲಿ ಆಚರಣೆ ಆರಂಭಿಸಿದರು. ನಂತರ ಮೈಸೂರು ರಾಜಧಾನಿಗೆ ದಸರಾ ಆಚರಣೆ ವರ್ಗಾವಣೆಗೊಂಡಿತು. ರಾಜರ ಆಳ್ವಿಕೆ ಕಾಲದಲ್ಲಿ ರಾಜ ಮಹಾರಾಜರು ಅಂಬಾರಿಯಲ್ಲಿ ಮೆರವಣಿಗೆ ಸಾಗುತ್ತಿದ್ದರು.

ಈಗ ಪ್ರಜಾಪ್ರಭುತ್ವ ಸರ್ಕಾರ ಬಂದ ಮೇಲೆ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ವಿಗ್ರಹವನ್ನು ಕೂರಿಸಿ ಅದಕ್ಕೆ ಪುಷ್ಪಾರ್ಚನೆ ಮಾಡಿ ಮೆರವಣಿಗೆ ಮಾಡುವ ಸಂಪ್ರದಾಯ ಆರಂಭವಾಯಿತು. ವಿಜಯದಶಮಿ ದಿನ ಜಂಬೂಸವಾರಿಯಲ್ಲಿ ಎಲ್ಲಾ ಜಿಲ್ಲೆಗಳಿಂದ ಸ್ತಬ್ಧಚಿತ್ರಗಳು ಬರುತ್ತವೆ. ಈ ವರ್ಷದ ವಿಶೇಷ ಸರ್ಕಾರದ ಗ್ಯಾರಂಟಿ ಯೋಜನೆಗಳ ಸ್ತಬ್ಧಚಿತ್ರಗಳ ಪ್ರದರ್ಶನವಿದೆ ಎಂದರು.

ದಸರಾ ನಾಡಹಬ್ಬವಾಗಿರುವುದರಿಂದ ಜನರ ಹಬ್ಬವಾಗಿ ಆಚರಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತದೆ. ಇವತ್ತು ಪಂಜಿನ ಕವಾಯತು ಪ್ರದರ್ಶನ ಇದೆ, ಜನರು ಖುಷಿಯಿಂದ ಭಾಗವಹಿಸುತ್ತಿದ್ದಾರೆ. ಮಹಿಳೆಯರು ಈ ಬಾರಿ ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ ಎಂದರು. ದಸರಾ ಪ್ರಾಧಿಕಾರ ರಚನೆ ಬಗ್ಗೆ ಯೋಚನೆ ಮಾಡಿಲ್ಲ.

ರಾಮನಗರವನ್ನು ಬೆಂಗಳೂರು ನಗರಕ್ಕೆ ಸೇರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆಯೇ ಎಂದು ಸುದ್ದಿಗಾರರು ಕೇಳಿದಾಗ ಇಂದು ದಸರಾ ಹಬ್ಬದ ಬಗ್ಗೆ ಕೇಳಿ ಎಂದರೆ ಇದೆಲ್ಲ ಮಾತನಾಡುತ್ತೀರ ಎಂದು ಸಿಎಂ ಗರಂ ಆದರು.

ಇಂದು ಮಧ್ಯಾಹ್ನ 1.46ರಿಂದ 2.48ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿದೆ. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ನಂತರ ಬಂಜೂಸವಾರಿಗೆ ಚಾಲನೆ ನೀಡಲಾಗುತ್ತದೆ. ನಂತರ ನಂದಿಧ್ವಜ, ಸ್ತಬ್ದಚಿತ್ರ, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ. ಮೈಸೂರು ಅರಮನೆಯಿಂದ ಹೊಡಲಿರುವ ಜಂಬೂ ಸವಾರಿ ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್‌, ತಿಲಕ್ ನಗರ ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 4 ರಿಂದ 5 ಕಿ ಮೀ ಜಂಬೂ ಸವಾರಿ ನಡೆಯಲಿದೆ.

ಜಂಬೂಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿ: ಈ‌ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿಯಾಗಲಿವೆ. ರಾಜ್ಯಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತ ಸ್ತಬ್ಧ ಚಿತ್ರಗಳು ಸಹ ಇರುತ್ತವೆ. ಈ ಬಾರಿ ದಸರಾ ಮೆರವಣಿಗೆಯಲ್ಲಿ ಗಂಡುಕಲೆ ಎಂತಲೇ ಖ್ಯಾತಿ ಪಡೆದಿರುವ ಆಕರ್ಷಕ ನಂದಿಧ್ವಜ ಕುಣಿತದಲ್ಲಿ ಇದೇ ಮೊದಲ ಬಾರಿಗೆ 108 ನಂದಿಧ್ವಜ ಕುಣಿತ ಮಾಡಲಿದೆ.

andolanait

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

5 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

6 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

6 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

7 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

7 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

8 hours ago