BREAKING NEWS

ಅಮುಲ್‌ ಪ್ರವೇಶ ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ: ಡಿಕೆ ಗರಂ

ಬೆಂಗಳೂರು: ಗುಜರಾತ್‍ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್‍ನ ನಂದಿನಿ ಬ್ರಾಂಡ್ ಯಾವುದರಲ್ಲೂ ಕಡಿಮೆ ಇಲ್ಲ. ಹೀಗಿರುವಾಗ ಗುಜರಾತ್‍ನಿಂದ ಹಾಲು, ಮೊಸರು ತಂದು ಇಲ್ಲಿ ಮಾರಾಟ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.

ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದ ಬಿಜೆಪಿ ಈಗ ಮುಳುಗಿಸುವ ಪ್ರಯತ್ನ ನಡೆಸುತ್ತಿದೆ. ಇದು ತಪ್ಪ ಬೇಕಾದರೆ ಬಿಜೆಪಿ ಸರ್ಕಾರ ತೊಲಗಬೇಕು. ಅಮೂಲ್ ಹಾಲು ನಿಯಂತ್ರಣ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಥವಾ ಕೆಎಂಎಫ್ ಆಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕೈನಲ್ಲಿ ಇಲ್ಲ. ಅಸಾಹಯಕರಾಗಿರುವವರು ಕೈಗೆ ಬಳೆ ತೊಟ್ಟು ಕುಳಿತುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ವಿಷಯಗಳ ಕುರಿತು ಪ್ರಕಟಣೆಗಳನ್ನು ಅಳವಡಿಸಿಕೊಂಡಿರುವ ಆಟೋಗಳಿಗೆ ತಲಾ ಐದು ಸಾವಿರ ರೂಪಾಯಿ ದಂಡ ಹಾಕುತ್ತಿರುವುದರ ವಿರುದ್ಧ ಕಿಡಿಕಾರಿದರು. ತಮ್ಮಗೆ ಇಷ್ಟವಾದ ಅಭ್ಯರ್ಥಿ ಹಾಗೂ ಪಕ್ಷಕ್ಕೆ ಬೆಂಬಲ ನೀಡುವುದು ಪ್ರತಿಯೊಬ್ಬರ ಹಕ್ಕು. ಅವರಿಗೆ ಸಾರಿಗೆ ಇಲಾಖೆ ತಲಾ ಐದು ಸಾವಿರ ರೂಪಾಯಿ ದಂಡ ವಿಧಿಸಿ, ಆಟೋಗಳನ್ನು ಜಪ್ತಿ ಮಾಡುತ್ತಿದೆ.

ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಕೂಡಲೇ ಆಟೋ ಚಾಲಕರಿಗೆ ನೀಡುತ್ತಿರುವ ಕಿರುಕೂಳವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಾವು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು. ತಮ್ಮ ಪರವಾಗಿ ಪ್ರಚಾರಕ್ಕೆ ಬಳಸಿಕೊಂಡವರು ಆಟೋ ಚಾಲಕರ ನೆರವಿಗೆ ನಿಲ್ಲಬೇಕು ಎಂದು ಅವರು ಕರೆ ನೀಡಿದರು.

ಏಪ್ರಿಲ್ ಕೋಲಾರದಲ್ಲಿ ಏಪ್ರಿಲ್ 10ರಂದು ಕೋಲಾರದಲ್ಲಿ ನಡೆಯಬೇಕಿದ್ದ ಸತ್ಯಮೇವ ಜಯತೆ ಯಾತ್ರೆಗಿಂತ ಮೊದಲು ಅಭ್ಯರ್ಥಿಗಳ ಆಯ್ಕೆ ಕುರಿತು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago