BREAKING NEWS

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆ ಕಾರ್ಯಕರ್ತ ಅರೆಸ್ಟ್

ದಾವಣಗೆರೆ‌ : ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್‌ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಅನುಮಾನ ವ್ಯಕ್ತವಾಗಿತ್ತು.

ಖ್ಯಾತ ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್‌, ವಸುಂಧರ ಭೂಪತಿ ಸೇರಿದಂತೆ ಕೆಲವು ಸ್ವಾಮೀಜಿಗಳಿಗೆ ಅನಾಮಧೇಯ ಹೆಸರಿನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಸಿಸಿಬಿಗೆ ತನಿಖೆಗೆ ವಹಿಸಿತ್ತು. ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು.

ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು. ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.

ಒಂದೇ ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್‌ ಮಾಡಲಾಗಿತ್ತು.

lokesh

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

2 hours ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

2 hours ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

3 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

4 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

12 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

13 hours ago