ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಪ್ರವಹಿಸಿ ಲೈನ್‌ಮೆನ್ ಸಾವು

ಹುಣಸೂರು: ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಲೈನ್‌ಮೆನ್ ಒಬ್ಬರು ಸಾವನ್ನಪ್ಪಿರುವ ಘಟನೆ ಹೊಸಪುರ ಗ್ರಾಮದ ಬಳಿ ನಡೆದಿದೆ.

ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕರಿನಾಯಕ ಎಂಬ ಲೈನ್‌ಮೆನ್ ಹೊಸಪುರದ ಬಳಿ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಇವರ ಸಹ ಉದ್ಯೋಗಿ ಪ್ರಶಾಂತ್ ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಅಕ್ಕಪಕ್ಕದ ಗ್ರಾಮಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕರಿನಾಯಕ ಮೃತಪಟ್ಟಿದ್ದಾರೆ.

ಇವರ ಸಾವಿಗೆ ಕೆಇಬಿ ಅಧಿಕಾರಿಗಳೇ ಕಾರಣ ಇವರೇ ನೇರ ಹೊಣೆಯಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

× Chat with us