BREAKING NEWS

ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಯಾರಿಗೆಲ್ಲಾ ಸ್ಥಾನ?

ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಬೈರತಿ ಬಸವರಾಜ್‌ ಅವರು ಉಪಾಧ್ಯಕ್ಷರಾಗಿದ್ದರೆ, ಮತ್ತೊಬ್ಬ ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಶನಿವಾರ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಯಾರಿಗೆ ಯಾವ ಹುದ್ದೆಗಳು?

ಹತ್ತು ಉಪಾಧ್ಯಕ್ಷರು : ಮಾಜಿ ಸಚಿವರಾದ ಮುರುಗೇಶ್ ನಿರಾಣಿ (ಬಾಗಲಕೋಟೆ), ಬೈರತಿ ಬಸವರಾಜ್ (ಬೆಂಗಳೂರು), ನಾಯಕರಾದ ರಾಜುಗೌಡ ನಾಯಕ್ (ಯಾದಗಿರಿ), ಎನ್ ಮಹೇಶ್ (ಚಾಮರಾಜನಗರ), ಅನಿಲ್ ಬೆನಕೆ (ಬೆಳಗಾವಿ), ಹರತಾಳು ಹಾಲಪ್ಪ (ಶಿವಮೊಗ್ಗ), ರೂಪಾಲಿ ನಾಯಕ್ (ಉತ್ತರ ಕನ್ನಡ), ಡಾ. ಬಸವರಾಜ್ ಕೇಲಗಾರ (ಹಾವೇರಿ), ಮಾಳವಿಕಾ ಅವಿನಾಶ್ (ಬೆಂಗಳೂರು) ಹಾಗೂ ಎಂ. ರಾಜೇಂದ್ರ (ಮೈಸೂರು) ಅವರನ್ನು ನೇಮಿಸಲಾಗಿದೆ.

ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು : ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಡಚಿಯ ಪಿ ರಾಜೀವ್, ಬೆಂಗಳೂರಿನ ನಂದೀಶ್ ರೆಡ್ಡಿ, ಹಾಸನ ಪ್ರೀತಮ್ ಗೌಡ ನೇಮಕಗೊಂಡಿದ್ದಾರೆ.

1೦ ಮಂದಿ ರಾಜ್ಯ ಕಾರ್ಯದರ್ಶಿಗಳು: ಬೀದರ್‌ನ ಶೈಲೇಂದ್ರ ಬೆಲ್ದಾಳೆ, ಶಿವಮೊಗ್ಗ ಡಿ.ಎಸ್ ಅರುಣ್, ಕಲಬುರಗಿಯ ಬಸವರಾಜ್ ಮತ್ತಿಮೋಡ್, ಚಿಕ್ಕಬಳ್ಳಾಪುರದ ಸಿ ಮುನಿರಾಜು, ತುಮಕೂರಿನ ವಿನಯ್ ಬಿದರೆ, ಮಂಗಳೂರಿನ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೊಪ್ಪಳದ ಶರಣು ತಳ್ಳಕೇರಿ, ಯಾದಗಿರಿಯ ಲಲಿತಾ ಅನಾಪುರ, ಮಂಡ್ಯದ ಲಕ್ಷ್ಮೀ ಅಶ್ವಿನ್ ಗೌಡ, ತುಮಕೂರಿನ ಅಂಬಿಕಾ ಹುಲಿನಾಯ್ಕರ್ ನೇಮಕ.

ಬಿಜೆಪಿ ರಾಜ್ಯ ಖಚಾಂಚಿಯಾಗಿ ಬೆಂಗಳೂರಿನ ಸುಬ್ಬ ನರಸಿಂಹ ಅವರನ್ನು ಮುಂದುವರಿಸಲಾಗಿದೆ.

ವಿವಿಧ ಮೋರ್ಚಾಗಳ ರಾಜ್ಯಾಧ್ಯಕ್ಷರು:
ಮಹಿಳಾ ಮೋರ್ಚಾ: ಸಿ ಮಂಜುಳಾ (ಮಾಜಿ ಮಹಿಳಾ ಆಯೋಗ ಅಧ್ಯಕ್ಷೆ)
ಯುವಮೋರ್ಚಾ: ಧೀರಜ್ ಮುನಿರಾಜು (ದೊಡ್ಡಬಳ್ಳಾಪುರ ಶಾಸಕ)
ಎಸ್ಟಿ ಮೋರ್ಚಾ: ಬಂಗಾರು ಹನುಮಂತ್, ಬಳ್ಳಾರಿ
ಎಸ್ಸಿ ಮೋರ್ಚಾ: ಎಸ್ ಮಂಜುನಾಥ್ (ಸಕಲೇಶಪುರ ಶಾಸಕ)
ಓಬಿಸಿ ಮೋರ್ಚಾ: ರಘು ಕೌಟಿಲ್ಯ. ಮೈಸೂರು
ರೈತ ಮೋರ್ಚಾ: ಎ.ಎಸ್ ಪಾಟೀಲ್ ನಡಹಳ್ಳಿ (ಮಾಜಿ ಶಾಸಕ), ವಿಜಯಪುರ
ಅಲ್ಪಸಂಖ್ಯಾತ ಮೋರ್ಚಾ: ಅನಿಲ್‌ ಥಾಮಸ್‌, ಮೈಸೂರು

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

13 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

13 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

20 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

20 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

20 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

20 hours ago