BREAKING NEWS

ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ

ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ.

ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡ್​ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3 ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ನೇರ ಪ್ರಸಾರ ಮಾಡುತ್ತಿದೆ. ಇದಕ್ಕಾಗಿ ದೊಡ್ಡ ಎಲ್​ಇಡಿ ಸ್ಕ್ರೀನ್​ ಹಾಕಲಾಗಿದೆ. ಇನ್ನು ವಿಶೇಷ ಏನೆಂದರೆ ಲ್ಯಾಂಡರ್ ಮಾಹಿತಿಗಳನ್ನು ತಾರಾಲಯದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.

ಚಂದ್ರನ ಅಂಗಳಕ್ಕೆ ಲ್ಯಾಂಡರ್ ಇಳಿಯುವ ಕ್ಷಣವನ್ನು ನೋಡಲು ದೇಶವೇ ಕಾತುರವಾಗಿರುವುದರಿಂದ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು (ಆ.23)ಸಂಜೆ 5 ಗಂಟೆಯಿಂದ ಸಾಪ್ಟ್ ಲ್ಯಾಂಡಿಂಗ್ ನೇರ ಪ್ರಸಾರ ವೀಕ್ಷಿಸಲು ಈ ಅವಕಾಶ ಕಲ್ಪಿಸಲಾಗಿದೆ. ತಾರಾಲಯದ ಹೊರಗಡೆ ಆರು ದೊಡ್ಡ ಎಲ್ ಇಡಿ ಸ್ಕ್ರೀನ್ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೆಹರು ತಾರಾಲಯದ ಹೊರಭಾಗದಲ್ಲಿ ಸುಮಾರು 500 ಜನರು ನೇರ ಪ್ರಸಾರ ವೀಕ್ಷಿಸಲು ಅನುವುಮಾಡಿಕೊಡಲಾಗಿದೆ.

ವಿಕ್ರಮ್​ ಲ್ಯಾಂಡರ್ ಲ್ಯಾಂಡಿಂಗ್​ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ

ಇನ್ನು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಲ್ಯಾಂಡರ್ ಮಾಹಿತಿಗಳನ್ನು ತಾರಾಲಯ ದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.

ಒಟ್ಟಿನಲ್ಲಿ ಲ್ಯಾಂಡಿಂಗ್​ನ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಜನರು ಕಾತುರತೆಯಿಂದ ಕಾಯುತ್ತಿದ್ದು, ಈ ಕ್ಷಣವನ್ನು ನೇರ ಪ್ರಸಾರದಲ್ಲಿ ನೋಡಲು ಅವಕಾಶವಿರುವುದರಿಂದ ಎಲ್ಲರ ಚಿತ್ತ ವಿಕ್ರಮ್ ಲ್ಯಾಂಡರ್​ ನತ್ತ ನೆಟ್ಟಿದೆ. ಬೆಂಗಳೂರಿನಲ್ಲಿ ಇದ್ದವರು ಈ ಅವಕಾಶವನ್ನು ಮಿಸ್​ ಮಾಡಿಕೊಳ್ಳಬೇಡಿ.

andolanait

Recent Posts

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

4 hours ago