ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳ ಅನ್ವಯ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಆದೇಶವನ್ನು ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ವರ್ಗಾವಣೆ ಮಾಡಲಾಗಿದ್ದು, ಪಾಂಡವಪುರ ಉಪ ವಿಭಾಗಾಧಿಕಾರಿ ಎಲ್.ಎಂ ನಂದೀಶ್ ಅವರನ್ನು ಮೈಸೂರು ಉಪ ವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿಯಾಗಿ ಬೆಂಗಳೂರು ಅಪರ ಜಿಲ್ಲಾಧಿಕಾರಿ ಟಿ.ಎನ್ ಕೃಷ್ಣ ಮೂರ್ತಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ವಿವಿಧ ಇಲಾಖೆಗೆ ವರ್ಗಾವಣೆಗೊಂಡ 42 ಕೆಎಎಸ್ ಅಧಿಕಾರಿಗಳ ಮಾಹಿತಿ ಇಲ್ಲಿದೆ.