BREAKING NEWS

Loksabha Election Results 2024: ಹೆಚ್‌ಡಿಕೆಗೆ ಲಕ್ಷ ಮತಗಳ ಮುನ್ನಡೆ

ಮಂಡ್ಯ: ಇಂದು ( ಜೂನ್‌ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭದ ಸುತ್ತುಗಳಲ್ಲಿ ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದುಕೊಳ್ಳುವ ಮುನ್ಸೂಚನೆಯನ್ನು ಮುನ್ನಡೆಯ ಅಂಕಿಅಂಶಗಳು ನೀಡುತ್ತಿವೆ.

ಪ್ರತಿ ಬಾರಿಯಂತೆ ಈ ಬಾರಿಯೂ ಭಾರೀ ಚರ್ಚೆಗೆ ಒಳಗಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ನ ವೆಂಕಟರಮಣೇಗೌಡ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಬೆಳಗ್ಗೆ 10.15ರ ಸಮಯಕ್ಕೆ ಕುಮಾರಸ್ವಾಮಿ 100937 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಈ ಸಮಯಕ್ಕೆ ಕುಮಾರಸ್ವಾಮಿ 248730 ಮತಗಳನ್ನು ಪಡೆದುಕೊಂಡಿದ್ದರೆ, ಎದುರಾಳಿ ವೆಂಕಟರಮಣೇಗೌಡ 147793 ಮತಗಳನ್ನು ಪಡೆದುಕೊಂಡಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

10 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

29 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

52 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago