ಬೆಂಗಳೂರು : ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ ಮನೆ, ಪ್ರಸನ್ನ ಇನ್ಸ್ಟಿಟ್ಯೂಷನ್, ಇಂದುಬೆಟ್ಟುವಿನ ಮನೆಯಲ್ಲಿ 20ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡದಿಂದ ಪರಿಶೀಲನೆ ಮುಂದುವರೆದಿದೆ.
ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆಯಲ್ಲೂ ನಗದು ಪತ್ತೆ : ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ಪರಿಶೀಲನೆ ಮುಂದುವರೆದಿದ್ದು ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ನಗದು, ಚಿನ್ನಾಭರಣ,ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಹಣ ಎಣಿಕೆ ಕಾರ್ಯದಲ್ಲಿ ತೊಡಗಿದೆ. ವಿದೇಶಿ ಕರೆನ್ಸಿ ಕೂಡ ಮನೆಯಲ್ಲಿ ಪತ್ತೆಯಾಗಿದ್ದು 80 ಲಕ್ಷ ನಗದು ಹಣ, 50 ಲಕ್ಷ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.
ಇಓ ವೆಂಕಟೇಶಪ್ಪ ಮನೆಯಲ್ಲಿ ಹಣ ಪತ್ತೆ : ಕೋಲಾರ ಜಿಲ್ಲೆ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ತಾ.ಪಂ. ಇಒ ವೆಂಕಟೇಶಪ್ಪ ಮನೆಗಳಲ್ಲಿ ಪರಿಶೀಲನೆ ಮುಂದುವರಿದಿದೆ. ಇಓ ವೆಂಕಟೇಶಪ್ಪ ಅವರಿಗೆ ಸೇರಿದ ಮನೆ, ಗೋಡೋನ್, ಹಾರ್ಡ್ ವೇರ್ ಶಾಪ್, ಕೋಳಿಫಾರಂ, ಪಾರ್ಮ್ ಹೌಸ್, ಐದಕ್ಕೂ ಹೆಚ್ಚು ಖಾಲಿ ನಿವೇಶನಗಳು, ಚಿನ್ನದ ಒಡವೆಗಳು, ಸೇರಿದಂತೆ ಮನೆಯಲ್ಲಿ ಸಾವಿರಾರು ರೂಪಾಯಿ ನಗದು ಪತ್ತೆಯಾಗಿದೆ. ನಾಲ್ಕು ಅಧಿಕಾರಿಗಳ ತಂಡದಿಂದ ಪರಿಶೀಲನೆ ಮುಂದುವರೆದಿದೆ.
ವನ್ಯಜೀವಿ ವಿಭಾಗದ ನಿವೃತ್ತ ಡಿಸಿಎಫ್ ನಾಗರಾಜ್ ಮನೆಗಳ ಮೇಲೆ ರೇಡ್ : ಶಿವಮೊಗ್ಗ ನಗರದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವನ್ಯಜೀವಿ ವಿಭಾಗದ ನಿವೃತ್ತ ಡಿಸಿಎಫ್ ನಾಗರಾಜ್ ಮನೆಗಳ ಮೇಲೆ ರೇಡ್ ಆಗಿದೆ. ಶಿವಮೊಗ್ಗ ನಗರ ಸಾಗರ ರಸ್ತೆಯ ಬಳಿ ಮನೆ, ಫಾರ್ಮ್ ಹೌಸ್, ಶಿವಮೊಗ್ಗದ ಗುಡ್ಲಕ್ ಸರ್ಕಲ್ ಬಳಿಯ ವಿಸ್ಮಯ ಕಾಂಪ್ಲೆಕ್ಸ್ ಹಾಗೂ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ವಿಜಯೇಂದ್ರ ನಾಮಪತ್ರ ಸಲ್ಲಿಕೆ ವೇಳೆ ನಾಗರಾಜ್ ಬಿಜೆಪಿ ಸೇರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…