BREAKING NEWS

ಮೈಸೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಇಂದು ( ಜನವರಿ 31 ) ಬೆಳ್ಳಂಬೆಳಗ್ಗೆಯೇ ಹಲವು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಆರೋಪಡಿಯಲ್ಲಿ ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಹರ್ಷ ಸೇರಿದಂತೆ ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಹಾಸನ, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಮಂಗಳೂರು ಸೇರಿದಂತೆ ವಿವಿಧೆಡೆ ಲೋಕಾ ಅಧಿಕಾರಿಗಳ ಕಚೇರಿ ಹಾಗೂ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಮಂಡ್ಯ ಲೋಕೋಪಯೋಗಿ ಇಲಾಖೆಯ ಇಇ ಆಗಿರುವ ಹರ್ಷ ಅವರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯದಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದಲ್ಲಿರುವ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್‌ಹೌಸ್‌ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಅಲ್ಲದೇ ಮೈಸೂರಿನ ಮುಡಾ ಇಂಜಿನಿಯರ್‌ ಯಜ್ಞೇಂದ್ರ ಮನೆ ಮೇಲೂ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಜೆಪಿ ನಗರದಲ್ಲಿರುವ ಮನೆ, ವಿಜಯನಗರದಲ್ಲಿರುವ ಅಪಾರ್ಟ್‌ಮೆಂಟ್‌, ಕೆಆರ್‌ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಸಹೋದರನ ಮನೆ ಮೇಲೂ ಸಹ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.

ಹಾಸನದ ಆಹಾರ ನಿರೀಕ್ಷಕ ಜಗನ್ನಾಥ್‌ ನಿವಾಸ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಗನ್ನಾಥ್‌ ಸಹೋದರ ರಿಯಲ್‌ ಎಸ್ಟೇಟ್‌ ಉದ್ಯಮಿ ಕಿರಣ್‌ ನಿವಾಸ ಹಾಗೂ ಕಚೇರಿ ಮೇಲೂ ಸಹ ದಾಳಿ ನಡೆದಿದೆ.

ಅಲ್ಲದೇ ಚಿಕ್ಕಮಗಳೂರಿನ ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ನೇತ್ರಾವತಿ, ತುಮಕೂರಿನ ಶಿರಾ ಗೇಟ್‌ ಬಳಿ ಇರುವ ಕೆಆರ್‌ಡಿಎಲ್‌ ಇಂಜಿನಿಯರ್‌ ಹನುಮಂತರಾಯಪ್ಪ ಮನೆ ಹಾಗೂ ಕಚೇರಿ ಮೇಲೂ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.

andolana

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

18 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago